ನಾಲ್ವರು ಮೊಬೈಲ್ ಸುಲಿಗೆಕೋರರ ಬಂಧನ

Prasthutha|

ಬೆಂಗಳೂರು: ನಗರದಲ್ಲಿ ಮೊಬೈಲ್ ಕಳವು ಸುಲಿಗೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಈಶಾನ್ಯ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

- Advertisement -

ಯಲಹಂಕದ ಶ್ರೀನಿವಾಸನಗರದ ಮೋಹನ್ ರಾಜ್ (20), ಶ್ರೀರಾಂಪುರದ ದಿನೇಶ್(21), ಯಲಹಂಕದ ಸಾಹಿಲ್ ಬೇಗ್(20) ಹಾಗೂ ರಾಜಾನುಕುಂಟೆಯ ಶ್ರೀನಿವಾಸ್(21) ಬಂಧಿತ ಆರೋಪಿಗಳಾಗಿದ್ದಾರೆ ಎಂದು ಡಿಸಿಪಿ ಡಾ.ಅನೂಪ್ ಶೆಟ್ಟಿ ತಿಳಿಸಿದ್ದಾರೆ.

ಆರೋಪಿಗಳು ಈಶಾನ್ಯ ವಿಭಾಗ ಸೇರಿ ನಗರದ ವಿವಿಧ ಭಾಗಗಳಲ್ಲಿ ಮೊಬೈಲ್ ಕಳ್ಳತನ ಹಾಗೂ ಸುಲಿಗೆ ಮಾಡುತ್ತಿದ್ದರು. ಸಂಪಿಗೆಹಳ್ಳಿ, ಯಲಹಂಕ ಹಾಗೂ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

- Advertisement -

ಪ್ರಕರಣ ದಾಖಲಿಸಿ ಕಾರ್ಯಾಚರಣೆ ಕೈಗೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಒಂದು ಬೈಕ್ ಹಾಗೂ ಐದು ಮೊಬೈಲ್ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Join Whatsapp