ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ; ಸಾಲಬಾಧೆ ಶಂಕೆ

Prasthutha: June 2, 2021

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರದ ಎಚ್. ಮೂಕಹಳ್ಳಿಯಲ್ಲಿ ಬುಧವಾರ ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೂ ಸಾಲಬಾಧೆಯಿಂದ ಅವರು ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.ಮೂಕಹಳ್ಳಿಯ ಮಹದೇವಪ್ಪ(47) ಅವರ  ಪತ್ನಿ ಮಂಗಳಮ್ಮ(40), ಅವರ ಮಕ್ಕಳಾದ ಜ್ಯೋತಿ (14) ಶ್ರುತಿ (12) ಆತ್ಮಹತ್ಯೆ ಮಾಡಿಕೊಂಡವರು.

ಮಹಾದೇವಪ್ಪ ಅವರು ಇಪ್ಪತ್ತು ದಿನದ ಹಿಂದೆ ಕೋವಿಡ್ ಬಂದು ಗುಣಮುಖರಾಗಿ ಮನೆಗೆ ಬಂದಿದ್ದರು. ನಿನ್ನೆ ರಾತ್ರಿ 9 ಗಂಟೆ ವೇಳೆ ಗ್ರಾಮದ ಕುಮಾರ್ ಎಂಬುವರ ಜೊತೆಗೆ ಮೊಬೈಲ್ ನಲ್ಲಿ  ಮಾತನಾಡಿದ್ದಾರೆ. ಅದಾದ ಬಳಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.ಗ್ರಾಮದ ನಿವಾಸಿಯೊಬ್ಬರು ಬುಧವಾರ ಬೆಳಗ್ಗೆ ಮಹಾದೇವಪ್ಪ ಅವರ ಮನೆಗೆ ಹೋಗಿ ಬಾಗಿಲು ಬಡಿದಾಗ ಯಾವ ಪ್ರತಿಕ್ರಿಯೆಯೂ ಬಂದಿರಲಿಲ್ಲ. ಆಗ ಮನೆಯ ಮೇಲೆ ಹತ್ತಿ ಹೆಂಚು ತೆರೆದು ನೋಡಿದಾಗ, ನಾಲ್ವರೂ ನೇಣು ಹಾಕಿಕೊಂಡಿರುವುದು ಬೆಳಕಿಗೆ ಬಂದಿದೆ.

ಮಹಾದೇವಪ್ಪ ಅವರಿಗೆ ಮೂವರು ಪುತ್ರಿಯರಿದ್ದು, ಹಿರಿಯ ಪುತ್ರಿಗೆ ವಿವಾಹವಾಗಿದೆ. ಮಹಾದೇವಪ್ಪ ಒಂದೂವರೆ ಎಕರೆ ಮಳೆ ಆಶ್ರಿತ ಜಮೀನು ಹೊಂದಿದ್ದು, ಕೂಲಿ ಕಾರ್ಮಿಕರಾಗಿದ್ದರು.  ಕಡು ಬಡತನ, ಸಾಲಬಾಧೆಯಿಂದ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಪೂರ್ವ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!