Home ಟಾಪ್ ಸುದ್ದಿಗಳು ಮರಕ್ಕೆ ಕಾರು ಡಿಕ್ಕಿ: ನಾಲ್ವರು ಸಜೀವ ದಹನ

ಮರಕ್ಕೆ ಕಾರು ಡಿಕ್ಕಿ: ನಾಲ್ವರು ಸಜೀವ ದಹನ

ಭೋಪಾಲ್: ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕುಟುಂಬದ ನಾಲ್ವರು ಸಜೀವ ದಹನವಾಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.


ಅಪಘಾತದಲ್ಲಿ ಮೃತಪಟ್ಟವರನ್ನು ಅಖಿಲೇಶ್ ಕುಶ್ವಾಹ, ಗೋಲು ಚೌಧರಿ, ರಾಕೇಶ್ ಕುಶ್ವಾಹ ಮತ್ತು ಅವರ ಪತ್ನಿ ಶಿವಾನಿ ಎಂದು ಗುರುತಿಸಲಾಗಿದೆ.
ಮಧ್ಯಪ್ರದೇಶದ ಹರ್ದಾ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಕಾರು ವೇಗವಾಗಿ ಬಂದು ಮರಕ್ಕೆ ಗುದ್ದಿದ ಪರಿಣಾಮ ಕಾರಿಗೆ ಬೆಂಕಿ ಹತ್ತಿಕೊಂಡು ಕಾರಿನಲ್ಲಿದ್ದ ಮೂವರು ಪುರುಷರು ಮತ್ತು ಒರ್ವ ಮಹಿಳೆ ಜೀವಂತವಾಗಿ ಸುಟ್ಟುಹೋಗಿದ್ದಾರೆ. ಮದುವೆಗೆ ತೆರಳಿದ್ದ ಕುಟುಂಬಸ್ಥರು ಮನೆಗೆ ಹಿಂತಿರುಗುವ ವೇಳೆ ಘಟನೆ ನಡೆದಿದ್ದು, ಆರು ತಿಂಗಳ ಹಿಂದೆ ವಿವಾಹವಾಗಿದ್ದ ದಂಪತಿಗಳು ದುರಂತದಲ್ಲಿ ಸಾವನ್ನಪ್ಪಿದ್ದಾರೆ.


ಘಟನೆಯ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ಅಗ್ನಿಶಾಮಕ ದಳದೊಂದಿಗೆ ಸ್ಥಳಕ್ಕಾಗಮಿಸಿದ್ದು, ಬೆಂಕಿಯಲ್ಲಿ ಬೆಂದಿದ್ದ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲೆಯ ತಿಮರ್ನಿ ಆರೋಗ್ಯ ಸಮುದಾಯ ಕೇಂದ್ರಕ್ಕೆ ಕಳುಹಿಸಲಾಯಿತು.

Join Whatsapp
Exit mobile version