ಅಮೆರಿಕದ ಶಾಲೆಯಲ್ಲಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ: ಇಬ್ಬರು ಶಿಕ್ಷಕರು ಸೇರಿ ನಾಲ್ವರು ಸಾವು

Prasthutha|

ವಾಷಿಂಗ್ಟನ್: ಅಮೆರಿಕದ ಜಾರ್ಜಿಯಾ ರಾಜ್ಯದ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಶಿಕ್ಷಕರು ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ. ಒಂಬತ್ತು ಮಂದಿ ಗಾಯಗೊಂಡಿದ್ದಾರೆ.

- Advertisement -


ಶಂಕಿತ ಬಂದೂಕುಧಾರಿ ಬಂಧನದಲ್ಲಿದ್ದಾನೆ. ಜಾರ್ಜಿಯಾದ ವಿಂಡರ್ ನಲ್ಲಿರುವ ಅಪಾಲಾಚಿ ಹೈಸ್ಕೂಲ್ ನ ಕೋಲ್ಟ್ ಕ್ರೇ (14) ಎಂದು ವಿದ್ಯಾರ್ಥಿ ಗುಂಡಿನ ದಾಳಿ ನಡೆಸಿದಾತ ಎಂದು ಗುರುತಿಸಲಾಗಿದೆ.


ಇಬ್ಬರು ವಿದ್ಯಾರ್ಥಿಗಳು ಮತ್ತು ಇಬ್ಬರು ಶಿಕ್ಷಕರು ಮೃತಪಟ್ಟಿದ್ದಾರೆ. ಕಾನೂನು ಜಾರಿ ಸಂಸ್ಥೆಗಳು ಗುಂಡಿನ ದಾಳಿ ಮತ್ತು ಅದರ ಹಿಂದಿನ ಉದ್ದೇಶದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



Join Whatsapp
Exit mobile version