ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ: ಓರ್ವ ಸಾವು

Prasthutha|

ಚಿಕ್ಕಬಳ್ಳಾಪುರ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪೈಕಿ ಬಾಲಕ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ನಾರಾಯಣಹಳ್ಳಿಯಲ್ಲಿ ನಡೆದಿದೆ.

- Advertisement -

ಮಕ್ಕಳಿಬ್ಬರಿಗೆ ವಿಷವುಣಿಸಿ ದಂಪತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಬಾಲಕ ಮುರಳಿ(14) ಸಾವನ್ನಪ್ಪಿದ್ದು, ಮಂಜುನಾಥ್(45), ಹನುಮಕ್ಕ(35), ಮನಿರಾಜು(20) ಅಸ್ವಸ್ಥರಾಗಿದ್ದಾರೆ.

ಈ ಮಧ್ಯೆ ಅಸ್ವಸ್ಥರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೊಸಕೋಟೆಯ ಎಂವಿಜೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

- Advertisement -

ಘಟನೆಗೆ ಸಂಬಂಧಿಸಿದಂತೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp