ಮಂಗಳೂರು | ವಿದ್ಯಾರ್ಥಿಗಳ ಮೇಲೆ ಹಲ್ಲೆ ಪ್ರಕರಣ: ನಾಲ್ವರು ಸಂಘಪರಿವಾರದ ಕಾರ್ಯಕರ್ತರ ಬಂಧನ

Prasthutha|

ಮಂಗಳೂರು: ಉಳ್ಳಾಲದ ಸೋಮೇಶ್ವರ ಬೀಚಿಗೆ ಸಮುದ್ರ ವಿಹಾರಕ್ಕೆಂದು ಬಂದಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಸಂಘಪರಿವಾರದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -


ಬಂಧಿತರನ್ನು ಯತೀಶ್ ಬಸ್ತಿಪಡ್ಪು, ಸಚಿನ್ ತಲಪಾಡಿ, ಸುಹಾನ್ ತಲಪಾಡಿ ಹಾಗೂ ಇನ್ನೋರ್ವ ಅಪ್ರಾಪ್ತ ವ್ಯಕ್ತಿ ಎಂದು ಗುರುತಿಸಲಾಗಿದೆ.


ಖಾಸಗಿ ವಿದ್ಯಾಸಂಸ್ಥೆಗೆ ಸೇರಿದ ಕೇರಳ ಮೂಲದ ಆರು ಮಂದಿ ವಿದ್ಯಾರ್ಥಿಗಳು ಗುರುವಾರ ವಿಹಾರಕ್ಕೆಂದು ಸೋಮೇಶ್ವರ ಕಡಲ ತೀರಕ್ಕೆ ಬಂದಿದ್ದರು. ಮೂವರು ವಿದ್ಯಾರ್ಥಿಗಳು ಮುಸ್ಲಿಂ ಸಮುದಾಯಕ್ಕೆ ಸೇರಿದವರೆಂಬುದನ್ನು ಗಮನಿಸಿದ ಸಮಘಪರಿವಾರದ ಕಾರ್ಯಕರ್ತರು ಹಿಂಬಾಲಿಸಿ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -


ಜೊತೆಗಿದ್ದ ಮೂವರು ವಿದ್ಯಾರ್ಥಿನಿಯರು ವಾಪಸ್ ಊರಿಗೆ ತೆರಳಿದ್ದಾರೆಂದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನಿಡಿದ್ದಾರೆ. ಸೋಮೇಶ್ವರ ಸಮುದ್ರ ತೀರದಲ್ಲಿ ಉಳ್ಳಾಲ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.



Join Whatsapp