ಬೆಂಗಳೂರಿನ 4 ಶಾಲೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ: ಪೊಲೀಸರಿಂದ ತೀವ್ರ ಶೋಧ

Prasthutha|

ಬೆಂಗಳೂರು:  ಬೆಂಗಳೂರಿನ ನಾಲ್ಕು ಕಡೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಅನಾಮಿಕ ಬೆದರಿಕೆಯ ಇ-ಮೇಲ್ ಸಂದೇಶ ಬಂದಿದ್ದು, ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ.

- Advertisement -

ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಇಂದು ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ್ದಾರೆ. ಪ್ರಮುಖವಾಗಿ ಶಾಲೆಗಳನ್ನು ಗುರಿಯಾಗಿಟ್ಟುಕೊಂಡು ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇಮೇಲ್ ಬಂದಿದ್ದು, ಪೊಲೀಸರು ಕೂಲಂಕಷವಾಗಿ ತನಿಖೆ ಮಾಡುತ್ತಿದ್ದಾರೆ. ಇಮೇಲ್ ಆಧರಿಸಿ ಖಾಸಗಿ ಶಾಲೆಗಳಿಗೆ ಬಾಂಬ್ ಸ್ಕ್ವಾಡ್, ಶ್ವಾನ ದಳ ಮೂಲಕ ತೆರಳಿ ಪರಿಶೀಲನೆ ನಡೆಸಲಾಗುತ್ತಿದೆ. ಈಗಾಗಲೇ ಶಾಲೆಗಳಿಂದ ಸಿಬ್ಬಂದಿಗಳನ್ನು, ಬೇಸಿಗೆ ಶಿಬಿರ, ಪರೀಕ್ಷೆ ಬರೆಯುವುದರಲ್ಲಿ ನಿರತರಾಗಿದ್ದ ಮಕ್ಕಳನ್ನು ಹೊರಗೆ ಕಳುಹಿಸಲಾಗಿದೆ ಎಂದು ಕಮಲ್ ಪಂತ್ ಮಾಹಿತಿ ನೀಡಿದ್ದಾರೆ.

ಇದುವರೆಗೆ ಶಾಲೆಗಳಲ್ಲಿ ಬಾಂಬ್ ಇಟ್ಟಿರುವ ಬಗ್ಗೆ ಮಾಹಿತಿ, ಸುಳಿವು ಸಿಕ್ಕಿಲ್ಲ, ಆದರೆ ಈ ವಿಷಯದಲ್ಲಿ ನಿರ್ಲಕ್ಷ್ಯ ಮಾಡುವಂತಿಲ್ಲ ಎಂದು ಹೇಳಿದ್ದಾರೆ.



Join Whatsapp