Home ರಾಷ್ಟ್ರೀಯ ಟೀಮ್ ಇಂಡಿಯಾ ಮೀಸಲು ಆಟಗಾರರಾಗಿ ನಾಲ್ವರು ಆಯ್ಕೆ

ಟೀಮ್ ಇಂಡಿಯಾ ಮೀಸಲು ಆಟಗಾರರಾಗಿ ನಾಲ್ವರು ಆಯ್ಕೆ

ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗಾಗಿ 15 ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದು, ಉಪನಾಯಕರಾಗಿ ಜಸ್​ಪ್ರೀತ್ ಬುಮ್ರಾ ಕಾಣಿಸಿಕೊಳ್ಳಲಿದ್ದಾರೆ.

ಹಾಗೆಯೇ ಸರಣಿಗಾಗಿ ನಾಲ್ವರು ಆಟಗಾರರನ್ನು ಮೀಸಲು ಪಟ್ಟಿಯಲ್ಲಿರಿಸಲಾಗಿದೆ. ಅಂದರೆ ಟೀಮ್ ಇಂಡಿಯಾದ ಯಾವುದಾದರು ಆಟಗಾರರು ಗಾಯಗೊಂಡರೆ, ಮೀಸಲು ಆಟಗಾರರ ಪಟ್ಟಿಯಿಂದ ಬದಲಿಯಾಗಿ ಆಯ್ಕೆ ಮಾಡಲಾಗುತ್ತದೆ. ಇಲ್ಲಿ ಮೂವರು ವೇಗಿಗಳು ಹಾಗೂ ಓರ್ವ ಆಲ್​ರೌಂಡರ್​ನನ್ನು ಮೀಸಲು ಆಟಗಾರರಾಗಿ ಹೆಸರಿಸಲಾಗಿದೆ.

ಮಯಾಂಕ್ ಯಾದವ್, ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ ಹಾಗೂ ನಿತೀಶ್ ಕುಮಾರ್ ರೆಡ್ಡಿ. ಇಲ್ಲಿ ಮಯಾಂಕ್, ಹರ್ಷಿತ್, ಪ್ರಸಿದ್ಧ್ ಕೃಷ್ಣ ವೇಗಿಗಳಾಗಿ ಆಯ್ಕೆಯಾದರೆ, ನಿತೀಶ್ ರೆಡ್ಡಿ ಹೆಚ್ಚುವರಿ ಆಲ್​ರೌಂಡರ್ ಆಗಿ ಸ್ಥಾನ ಪಡೆದಿದ್ದಾರೆ. ಈ ಆಟಗಾರರು ನ್ಯೂಝಿಲೆಂಡ್ ವಿರುದ್ಧದ ಸರಣಿಯ ವೇಳೆ ಟೀಮ್ ಇಂಡಿಯಾ ಜೊತೆ ಕಾಣಿಸಿಕೊಳ್ಳಲಿದ್ದಾರೆ.

ಪ್ರಸ್ತುತ ಭಾರತ ತಂಡದಲ್ಲಿ ವೇಗದ ಬೌಲರ್​ಗಳಾಗಿ ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ ಹಾಗೂ ಆಕಾಶ್ ದೀಪ್ ಕಾಣಿಸಿಕೊಂಡಿದ್ದಾರೆ. ಇದೀಗ ಮೀಸಲು ವೇಗದ ಬೌಲರ್​ಗಳಾಗಿ ಹರ್ಷಿತ್ ರಾಣಾ, ಮಯಾಂಕ್ ಯಾದವ್, ಪ್ರಸಿದ್ಧ್ ಕೃಷ್ಣಗೆ ಚಾನ್ಸ್ ನೀಡಲಾಗಿದೆ. ಹಾಗೆಯೇ ಆಲ್​ರೌಂಡರ್ ಆಗಿ ರಿಸರ್ವ್ ಪಟ್ಟಿಯಲ್ಲಿ ಆಯ್ಕೆಯಾಗಿರುವ ನಿತೀಶ್ ರೆಡ್ಡಿ ಕೂಡ ವೇಗದ ಬೌಲಿಂಗ್ ಆಲ್​ರೌಂಡರ್ ಎಂಬುದು ವಿಶೇಷ.

Join Whatsapp
Exit mobile version