Home ಟಾಪ್ ಸುದ್ದಿಗಳು ವಕೀಲನ ಮೇಲೆ ಹಲ್ಲೆಗೆ ಪ್ರತಿಭಟನೆ ನಡೆಸಿದ ವಕೀಲರ ವಿರುದ್ಧ ನಾಲ್ಕು ಪ್ರತ್ಯೇಕ ಪ್ರಕರಣ ದಾಖಲು

ವಕೀಲನ ಮೇಲೆ ಹಲ್ಲೆಗೆ ಪ್ರತಿಭಟನೆ ನಡೆಸಿದ ವಕೀಲರ ವಿರುದ್ಧ ನಾಲ್ಕು ಪ್ರತ್ಯೇಕ ಪ್ರಕರಣ ದಾಖಲು

ಚಿಕ್ಕಮಗಳೂರು: ವಕೀಲರೊಬ್ಬರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದು, ಸಂಬಂಧ 6 ಪೊಲೀಸರ ಮೇಲೆ ಎಫ್ ಐ ಆರ್ ದಾಖಲಾಗಿ ಅವರನ್ನು ಅಮಾನತುಗೊಳಿಸಲಾಗಿದೆ. ಬಳಿಕ ವಕೀಲನ ಮೇಲಿನ ಹಲ್ಲೆ ಖಂಡಿಸಿ ಚಿಕ್ಕಮಗಳೂರಿನ ಪೊಲೀಸ್ ಠಾಣೆಯಲ್ಲಿ ಪ್ರತಿಭಟನೆ ನಡೆಸಿರುವ ವಕೀಲರ ವಿರುದ್ಧ ನಾಲ್ಕು ಪ್ರತ್ಯೇಕ ಎಫ್ ಐ ಆರ್ ದಾಖಲಾಗಿದೆ.

ಠಾಣೆಯಲ್ಲಿ ಪ್ರತಿಭಟನೆ ನಡೆಸಿದ್ದ ವೇಳೆ ವಕೀಲರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಶನಿವಾರ ಮಧ್ಯರಾತ್ರಿವರೆಗೂ ಚಿಕ್ಕಮಗಳೂರಿನ ಹನುಮಂತಪ್ಪ ಸರ್ಕಲ್ ನಲ್ಲಿ ಪೊಲೀಸರು ಹಾಗೂ ಕುಟುಂಬದವರು ಪ್ರತಿಭಟನೆ ನಡೆಸಿದ್ದಾರೆ. ಹಲ್ಲೆ ನಡೆಸಿದವರ ವಿರುದ್ಧ ಎಫ್ ಐ ಆರ್ ದಾಖಲಿಸುವಂತೆ ಆಗ್ರಹಿಸಿದ್ದಾರೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಚಿಕ್ಕಮಗಳೂರು ಜಿಲ್ಲಾ ಬಾರ್ ಅಸೋಸಿಯೇಷನ್ ಅಧ್ಯಕ್ಷ ಸುಧಾಕರ್, ವಕೀಲ ಪ್ರೀತಮ್ ಸೇರಿದಂತೆ 15 ವಕೀಲರ ವಿರುದ್ಧ ಸೆಕ್ಷನ್ 503, 406, 353, 149 ಸೆಕ್ಷನ್ ಅಡಿ ಪ್ರಕರಣ ದಾಖಲಿಸಿಸಲಾಗಿದೆ.

Join Whatsapp
Exit mobile version