ಶಾಲಾ ಬಸ್-ಟ್ರ್ಯಾಕ್ಟರ್‌ ನಡುವೆ ಭೀಕರ ಅಪಘಾತ: ನಾಲ್ವರು ವಿದ್ಯಾರ್ಥಿಗಳು ಮೃತ್ಯು

Prasthutha|

ಬಾಗಲಕೋಟೆ: ಶಾಲಾ ಬಸ್ ಹಾಗೂ ಟ್ಯಾಕ್ಟರ್‌ ನಡುವೆ ಅಪಘಾತ ಸಂಭವಿಸಿ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಬಾಗಲಕೋಟೆಯ ಜಿಲ್ಲೆ ಜಮಖಂಡಿ ತಾಲ್ಲೂಕಿನ ಅಲಗೂರು ಗ್ರಾಮದಲ್ಲಿ ನಡೆದಿದೆ.

- Advertisement -

ಸಾಗರ ಕಡಕೋಳ (17), ಶ್ವೇತಾ (13), ಗೋವಿಂದ(13), ಬಸವರಾಜ (17) ಮೃತ ವಿದ್ಯಾರ್ಥಿಗಳು. ತಡರಾತ್ರಿ ನಡೆದ ಘಟನೆಯಲ್ಲಿ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 8ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಭಾನುವಾರ ಸ್ನೇಹಿತರೊಟ್ಟಿಗೆ ಕಾರ್ಯಕ್ರಮ ಮುಗಿಸಿಕೊಂಡು ಕವಟಗಿ ಗ್ರಾಮದ ಕಡೆಗೆ ಸ್ಕೂಲ್‌ಬಸ್ ಹೊರಟಿತ್ತು. ರಾತ್ರಿ 12 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಸದ್ಯ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Join Whatsapp