ಬೆಂಗಳೂರು–ಮೈಸೂರು ದಶಪಥ ಹೆದ್ದಾರಿಯಲ್ಲಿ ಸರಣಿ ಅಪಘಾತ: ನಾಲ್ಕು ವಾಹನಗಳು ಜಖಂ

Prasthutha|

ರಾಮನಗರ: ಬೆಂಗಳೂರು-ದಶಪಥ ಹೆದ್ದಾರಿಯಲ್ಲಿ ಶುಕ್ರವಾರ ಬೆಳಗ್ಗೆ ಸರಣಿ ಅಪಘಾತ ನಡೆದು ನಾಲ್ಕು ವಾಹನಗಳು ಜಖಂಗೊಂಡಿವೆ.

- Advertisement -


ಬಿಡದಿಯ ನೆಲ್ಲಿಗುಡ್ಡೆ ಕೆರೆಯ ಸಮೀಪ ಲಾರಿ, ಬಸ್ ಹಾಗೂ ಎರಡು ಕಾರು ನಡುವೆ ಅಪಘಾತ ನಡೆದಿದೆ. ಮೈಸೂರು ಕಡೆಯಿಂದ ಬೆಂಗಳೂರು ಕಡೆಗೆ ಸಂಚಾರ ಮಾಡುತ್ತಿದ್ದ ಈ ನಾಲ್ಕು ವಾಹನಗಳ ನಡುವೆ ಅಪಘಾತ ನಡೆದು ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.


ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.