‘ಮೋಸ ಮಾಡಿರುವ ಚೈತ್ರಾ ಕುಂದಾಪುರಗೆ ಶಿಕ್ಷೆ ಆಗಬೇಕು’
ಬೆಂಗಳೂರು: ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ಐದು ಕೋಟಿ ರೂಪಾಯಿ ವಂಚಿಸಿದ ಪ್ರಕರಣ ಸಂಬಂಧ ನಿನ್ನೆಯಿಂದ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಪೊಲೀಸರು ತಿವ್ರ ವಿಚಾರಣೆ ನಡೆಸುತ್ತಿದ್ದಾರೆ. ಈ ವಿಚಾರವಾಗಿ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಚೈತ್ರ ಕುಂದಾಪುರ ಅರೆಸ್ಟ್ ಆಗಿರುವುದನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಚೈತ್ರ ಕುಂದಾಪುರದ ವೈಯಕ್ತಿಕ ಸಂಪರ್ಕ ನನಗೆ ಇರಲಿಲ್ಲ. ಕಾರ್ಯಕ್ರಮಗಳಲ್ಲಿ ಸಿಕ್ಕಾಗ ಫೋಟೋ ತೆಗೆದಿರಬಹುದು. ಇನ್ನು ಈಪ್ರಕರಣದ ಬಗ್ಗೆ ಮಾಹಿತಿಗಳನ್ನು ಪೊಲೀಸರು ಸಂಗ್ರಹ ಮಾಡುತ್ತಿದ್ದಾರೆ. ಉನ್ನತ ಮಟ್ಟದ ತನಿಖೆಗೆ ನಾನು ಆಗ್ರಹಿಸುತ್ತೇನೆ. ನಾವು ಯಾರೂ ಕೂಡ ಚೈತ್ರಾಳ ಬೆಂಬಲಕ್ಕೆ ನಿಂತಿಲ್ಲ. ನಾವು ಯಾರು ಅವಳನ್ನು ರಕ್ಷಣೆ ಮಾಡುತ್ತಿಲ್ಲ ಎಂದರು.
ರಾಜಕೀಯ ಸಾಮಾಜಿಕ ಜೀವನದಲ್ಲಿ ಯಾರೇ ತಪ್ಪು ಮಾಡಿದರೂ ಶಿಕ್ಷೆ ಆಗಬೇಕು. ಪ್ರಕರಣದ ಕುರಿತು ತನಿಖೆ ಆಗುತ್ತಿದೆ ನಿಷ್ಪಕ್ಷವಾಗಿ ತನಿಖೆಯಾಗಬೇಕು. ತಪ್ಪು ಮಾಡಿದ್ರೆ ಶಿಕ್ಷೆ ಆಗಲಿ. ತಪ್ಪು ಮಾಡದೆ ಇದ್ದರೆ ಅನಾವಶ್ಯಕವಾಗಿ ತೊಂದರೆ ಕೊಡುವುದು ಬೇಡ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.