Home ಟಾಪ್ ಸುದ್ದಿಗಳು ಸಂಜನಾಗೆ ವಂಚನೆ: ಸ್ನೇಹಿತ ಥೋನ್ಸೆ ಸೇರಿ ಮೂವರ ವಿರುದ್ಧ ಎಫ್ ಐಆರ್

ಸಂಜನಾಗೆ ವಂಚನೆ: ಸ್ನೇಹಿತ ಥೋನ್ಸೆ ಸೇರಿ ಮೂವರ ವಿರುದ್ಧ ಎಫ್ ಐಆರ್

ಬೆಂಗಳೂರು: ಹಣ ಹೂಡಿಕೆ ಮಾಡಿಸಿಕೊಂಡು ಮೂರು ವರ್ಷವಾದರೂ ಲಾಭಾಂಶ ಹಾಗೂ ಅಸಲು ನೀಡದೆ ವಂಚನೆ ನಡೆಸಿದ್ದಾರೆ ಎಂದು ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ನೀಡಿರುವ ದೂರಿಗೆ ಸಂಬಂಧಿಸಿ ಸ್ನೇಹಿತ ರಾಹುಲ್ ಥೋನ್ಸೆ ಸೇರಿ
ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.


ರಾಹುಲ್ ತೊನ್ಸೇ ಅಲಿಯಾಸ್ ರಾಹುಲ್ ಶೆಟ್ಟಿ, ಆತನ ಸ್ನೇಹಿತರಾದ ರಾಮಕೃಷ್ಣ ಹಾಗೂ ರಾಘವೇಶ್ವರಿ ವಿರುದ್ಧ ಇಂದಿರಾನಗರ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.


ಕೆಲ ವರ್ಷಗಳ ಹಿಂದೆ ಸಂಜನಾಗೆ ರಾಹುಲ್ ಪರಿಚಯವಾಗಿತ್ತು. ಕೊಲಂಬೊ ಹಾಗೂ ಗೋವಾದ ಕ್ಯಾಸಿನೊ ಮ್ಯಾನೇಜಿಂಗ್ ಡೈರೆಕ್ಟರ್ ಅಗಿರುವುದಾಗಿ ಹೇಳಿಕೊಂಡು ತಾನು ಹೇಳಿದ ಕಡೆಗಳಲ್ಲಿ ಹಣ ಹೂಡಿದರೆ ಹೆಚ್ಚು ಹಣ ಸಂಪಾದನೆ ಮಾಡಬಹುದು ಎಂದು ಸಂಜನಾಗೆ ಆಶ್ವಾಸನೆ ನೀಡಿದ್ದನು.


ಅದರಂತೆ ಮತ್ತಿಬ್ಬರು ಆರೋಪಿಗಳಾದ ರಾಮಕೃಷ್ಣ ಹಾಗೂ ರಾಘವೇಶ್ವರಿ ಬ್ಯಾಂಕ್ ಖಾತೆಗಳಿಗೆ ಸಂಜನಾರಿಂದ ಹಣ ಹಾಕಿಸಿದ್ದರು. ಹಣ ನೀಡಿ ಕೆಲ ವರ್ಷವಾದರೂ ಲಾಭಾಂಶ ನೀಡಿರಲಿಲ್ಲ. ಹಲವು ಬಾರಿ ಹಣ ಹಿಂದಿರುಗಿಸುವಂತೆ ಹೇಳಿದರೂ ಹಣ ನೀಡಿದೆ ಸತಾಯಿಸುತ್ತಿದ್ದರು.


ತಾನು ಕೊಟ್ಟ ಹಣವನ್ನು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿ ಲಾಭ ಗಳಿಸಿಕೊಂಡಿದ್ದಾರೆ. ಈ ಮೂಲಕ ನನ್ನ ಘನತೆಗೆ ಧಕ್ಕೆ ತರುವಂತೆ ಸುಳ್ಳು ಆರೋಪ ಮಾಡಿದ್ದಾರೆ ಎಂದು ನ್ಯಾಯಾಲಯದಲ್ಲಿ ನಟಿ ಗಲ್ರಾನಿ ಪಿಸಿಆರ್ ದಾಖಲಿಸಿದ್ದರು.ಈ ಬಗ್ಗೆ ವಿಚಾರಣೆ ನಡೆಸಿದ 4ನೇ ಎಸಿಎಂಎಂ ನ್ಯಾಯಾಲಯ ತನಿಖೆ ನಡೆಸುವಂತೆ ಆದೇಶ ನೀಡಿತ್ತು. ಈ ಆದೇಶದ ಮೇರೆಗೆ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ರಾಹುಲ್ ಸೇರಿ ಮೂವರ ವಿರುದ್ಧ ಐಪಿಸಿ ಸೆಕ್ಷನ್ 120ಬಿ, 107, 354, 406, 420, 506, 34ರ ಅಡಿಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ.

Join Whatsapp
Exit mobile version