Home ಟಾಪ್ ಸುದ್ದಿಗಳು LKG ಯಿಂದ ಪಿಯುಸಿ ತನಕ ಸರ್ಕಾರಿ ಶಾಲಾ ಮಕ್ಕಳಿಗೆ ಬಸ್‌ ಫ್ರೀ: ಡಿ.ಕೆ ಶಿವಕುಮಾರ್ ಘೋಷಣೆ

LKG ಯಿಂದ ಪಿಯುಸಿ ತನಕ ಸರ್ಕಾರಿ ಶಾಲಾ ಮಕ್ಕಳಿಗೆ ಬಸ್‌ ಫ್ರೀ: ಡಿ.ಕೆ ಶಿವಕುಮಾರ್ ಘೋಷಣೆ

0

ಬೆಂಗಳೂರು: ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಮಹತ್ವದ ಘೋಷಣೆಯೊಂದನ್ನು ಹೊರಡಿಸಿದೆ.

ಈ ಕುರಿತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ LKG ಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪ್ರಮುಖ ಒತ್ತು ನೀಡಲಾಗುತ್ತಿದೆ ಎಂದು ಬರೆದುಕೊಂಡಿದ್ದಾರೆ.

ಸರ್ಕಾರಿ ಶಾಲೆಯ ಮಕ್ಕಳ ಹಾಜರಾತಿ, ಗುಣಮಟ್ಟ ಹೆಚ್ಚಿಸಲು ಸರ್ಕಾರದಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಅದಕ್ಕಾಗಿ ಕರ್ನಾಟಕ ಪಬ್ಲಿಕ್‌ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಅನುಕೂಲ ಕಲ್ಪಿಸಲು ಉಚಿತ ಬಸ್‌ ವ್ಯವಸ್ಥೆಯನ್ನ ಸರ್ಕಾರ ನೀಡಲಿದೆ ಎಂದಿದ್ದಾರೆ.

ಕರ್ನಾಟಕ ಸರ್ಕಾರವು ರಾಜ್ಯದ ಎಲ್ಲಾ ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳ (KPS) ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೌಲಭ್ಯ ಒದಗಿಸಲು ಹೊಸ ಯೋಜನೆಯನ್ನು ಪ್ರಾರಂಭಿಸಿದೆ. ಇದು ಸರ್ಕಾರಿ ಶಾಲೆಗಳಲ್ಲಿ ಓದುವ ಬಡ ಮಕ್ಕಳಿಗೆ ದೊಡ್ಡ ಸಹಾಯವಾಗಲಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version