ನವದೆಹಲಿ: ಆಮ್ ಆದ್ಮಿ ಪಕ್ಷದ ಸಂಚಾಲಕ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಇಂದು ಹರಿಯಾಣದಲ್ಲಿ ಆಮ್ ಆದ್ಮಿ ಪಕ್ಷದ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಿದ್ದಾರೆ.
ಪತಿ ಅರವಿಂದ್ ಕೇಜ್ರಿವಾಲ್ ಜೈಲಿನಲ್ಲಿರುವುದರಿಂದ ಅವರ ಪತ್ನಿ ಹರಿಯಾಣದಲ್ಲಿ ಆಮ್ ಆದ್ಮಿ ಪಕ್ಷದ ಗೆಲುವಿನ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.
ಹರಿಯಾಣದ ಪಂಚಕುಲದಲ್ಲಿ ಇಂದು ನಡೆದ ಸಭೆಯಲ್ಲಿ ಮಾತನಾಡಿದ ದೆಹಲಿ ಸಿಎಂ ಪತ್ನಿ ಸುನೀತಾ ಕೇಜ್ರಿವಾಲ್ “ಕೇಜ್ರಿವಾಲ್ ಕಿ ಗ್ಯಾರಂಟಿ” ಎಂದು ಘೋಷಿಸಿದರು. ಅವರೊಂದಿಗೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಎಎಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಸಂದೀಪ್ ಪಾಠಕ್ ಮತ್ತು ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಇದ್ದರು. ಎಎಪಿ ಉಚಿತ ಮತ್ತು 24 ಗಂಟೆಗಳ ವಿದ್ಯುತ್, ಉಚಿತ ವೈದ್ಯಕೀಯ ಚಿಕಿತ್ಸೆ, ಉಚಿತ ಶಿಕ್ಷಣ, ಎಲ್ಲಾ ತಾಯಂದಿರು ಮತ್ತು ಸಹೋದರಿಯರಿಗೆ ತಿಂಗಳಿಗೆ 1,000 ರೂ., ಪ್ರತಿ ಯುವಕನಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದೆ.