Home Uncategorized ಕೊಡಗು | ಪೊಲೀಸರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಕೊಡಗು | ಪೊಲೀಸರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಕೊಡಗು: ಪೊಲೀಸರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವು ಇಂದು ಕೊಡಗು ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿ ನಡೆಯಿತು. ಪೊಲೀಸರು ರಾತ್ರಿ, ಹಗಲೆನ್ನದೆ ಸಮಾಜದ ಶಾಂತಿ ಸುವ್ಯವಸ್ಥೆ ಕಾಪಾಡಲು ಒತ್ತಡದ ನಡುವೆ ಕಾರ್ಯ ನಿರ್ವಹಿಸುತ್ತಾರೆ. ಪೊಲೀಸರ ಆರೋಗ್ಯ ಕಾಪಾಡುವುದು ಮೊದಲ ಆದ್ಯತೆಯಾಗಿದ್ದು ಈ ನಿಟ್ಟಿನಲ್ಲಿ ಪೊಲೀಸರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಯಿತು.


ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಮಂಗಳೂರು ಫಸ್ಟ್ ನ್ಯೂರೊ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಆರೋಗ್ಯ ತಪಾಸಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಆಸ್ಪತ್ರೆಯ ತಜ್ಞರು ಪಾಲ್ಗೊಂಡು ಪಾರ್ಶ್ವವಾಯು ಕುರಿತು ಮುಂಜಾಗೃತೆ ವಹಿಸುವಂತೆ ಸಲಹೆ ನೀಡಿ, ರೋಗ ಲಕ್ಷಣ ಮತ್ತು ಚಿಕಿತ್ಸೆಗಳ ಬಗ್ಗೆ ವಿವರಿಸಿದರು.

Join Whatsapp
Exit mobile version