Home ಟಾಪ್ ಸುದ್ದಿಗಳು ಕರ್ನಾಟಕದಲ್ಲಿ ಪ್ರತಿ ತಿಂಗಳು 2 ದಿನ ಗರ್ಭಿಣಿಯರ ಉಚಿತ ಆರೋಗ್ಯ ತಪಾಸಣೆ

ಕರ್ನಾಟಕದಲ್ಲಿ ಪ್ರತಿ ತಿಂಗಳು 2 ದಿನ ಗರ್ಭಿಣಿಯರ ಉಚಿತ ಆರೋಗ್ಯ ತಪಾಸಣೆ

ಬೆಂಗಳೂರು: ಗರ್ಭಿಣಿಯರ ಸುರಕ್ಷತೆ ದೃಷ್ಟಿಯಿಂದ ಮಾತೃತ್ವ ಸುರಕ್ಷತಾ ಅಭಿಯಾನವನ್ನ ಕರ್ನಾಟಕದಲ್ಲಿ ದೊಡ್ಡ ಮಟ್ಟದಲ್ಲಿ ನಡೆಸಲು ರಾಜ್ಯ ಆರೋಗ್ಯ ಇಲಾಖೆ ಮುಂದಾಗಿದೆ. ಪ್ರತಿ ತಿಂಗಳು 9 ಹಾಗೂ 24ನೇ ತಾರಿಖಿನಂದು ಎರಡು ಬಾರಿ ಗರ್ಭಿಣಿಯರ ಉಚಿತ ಆರೋಗ್ಯ ತಪಾಸಣೆ ನಡೆಯಲಿದೆ.

ಇದೇ ತಿಂಗಳ 22 ರಂದು ರಾಯಚೂರಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ಗರ್ಬಿಣಿಯರಿಗಾಗಿಯೇ ಬೃಹತ್ ಉಚಿತ ಆರೋಗ್ಯ ಶಿಬಿರ ಹಮ್ಮಿಕೊಂಡಿದ್ದು, ಆರೋಗ್ಯ ಸವಿವ ದಿನೇಶ್ ಗುಂಡೂರಾವ್ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.

ಮಾತೃತ್ವ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲು ಮುಂದಾಗಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಾಯಂದಿರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಗರ್ಭಿಣಿಯರ ಆರೋಗ್ಯ ತಪಾಸಣಾ ಶಿಬಿರಗಳನ್ನ ದೊಡ್ಡಮಟ್ಟದಲ್ಲಿ ರಾಜ್ಯದಾದ್ಯಂತ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆಸುವಂತೆ ಸೂಚನೆ ನೀಡಿದ್ದಾರೆ.‌

ಮಾತೃತ್ವ ಸುರಕ್ಷಾ ಅಭಿಯಾನದಲ್ಲಿ ಗರ್ಭಿಣಿಯರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಹಾಕಿಕೊಂಡಿರುವ ಕ್ರಮಗಳು ಈ ಕೆಳಗಿನಂತಿದೆ.

ಗುಣಾತ್ಮಕ ಹೆರಿಗೆ ಸೇವೆಗಳನ್ನ ಒದಗಿಸುವುದು.
ಆರಂಭಿಕ ANC ನೋಂದಣಿ, 4 ದಿನ ನಿತ್ಯದ ANC ಭೇಟಿಗಳನ್ನು ಖಚಿತಪಡಿಸಿಕೊಳ್ಳುವುದು.
ಸಾಮಾನ್ಯ ಗರ್ಭಿಣಿ ಮಹಿಳೆಯರಿಗೆ 1 PMSMA ಭೇಟಿ ಮತ್ತು HRP ಗಳಿಗೆ ಹೆಚ್ಚುವರಿ 3 ಭೇಟಿಗಳು.
ಪ್ರತಿ ಗರ್ಭಿಣಿ ಮಹಿಳೆಗೆ ಜನನ ಯೋಜನೆಯನ್ನು ಮುಂಚಿತವಾಗಿಯೇ ಖಚಿತಪಡಿಸಿಕೊಳ್ಳುವುದು.
ಗರ್ಭಧಾರಣೆಯ 3 ತಿಂಗಳ ಮೊದಲು ಮತ್ತು ಗರ್ಭಧಾರಣೆಯ 1 ನೇ ತ್ರೈಮಾಸಿಕದಲ್ಲಿ ಪೋಲಿಕ್ ಆಮ್ಲ ಮಾತ್ರೆಗಳನ್ನು ನೀಡಲಾಗುತ್ತದೆ.

ಓರಲ್ ಗ್ರೂಕೋಸ್ ಟಾಲರೆನ್ಸ್ ಟೆಸ್ಟ್ (OGTT) ಬಳಸಿಕೊಂಡು ಗರ್ಭಾವಸ್ಥೆಯ ಮಧುಮೇಹ ಮೆಲ್ಲಿಟಸ್‌ಗಾಗಿ
ಪ್ರತಿ ಗರ್ಭಿಣಿಯ ಕಡ್ಡಾಯ ತಪಾಸಣೆ ಮಾಡಲಾಗುತ್ತಿದೆ.
ಪ್ರತಿ ಭೇಟಿಯಲ್ಲಿ ರಕ್ತದೊತ್ತಡ ಮತ್ತು ತೂಕವನ್ನು ರೆಕಾರ್ಡ್ ಮಾಡಲಾಗುವುದು.
ಹೆರಿಗೆಯ ಚಿಹ್ನೆಗಳು ಮತ್ತು ಅಪಾಯದ ಚಿಹ್ನೆಗಳ ಬಗ್ಗೆ, ಗರ್ಭಿಣಿಯರಿಗೆ ಮತ್ತು ಅವರ ಕುಟುಂಬ ಸದಸ್ಯರಿಗೆ ಅರಿವು ಮೂಡಿಸುವುದು.
ಗರ್ಭಿಣಿಯರಿಗೆ ಆಹಾರ (ಪೌಷ್ಠಿಕಾಂಶ) ಮತ್ತು ವಿಶ್ರಾಂತಿಯ ಬಗ್ಗೆ ಸಲಹೆ.
ಪ್ರತಿ ತಿಂಗಳ 9 ಮತ್ತು 24 ರಂದು PMSMA ಮತ್ತು e-PMSMA ದಿನಗಳಲ್ಲಿ ಗಂಡಾಂತರ ಗರ್ಭಿಣಿಯರಿಗೆ ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞರುಗಳಿಂದ ಉತ್ತಮ ಆರೈಕೆ.

Join Whatsapp
Exit mobile version