Home ಟಾಪ್ ಸುದ್ದಿಗಳು ಸರ್ಕಾರಿ ಬಸ್‌ಗಳಲ್ಲಿ ತೃತೀಯ ಲಿಂಗಿಗಳಿಗೆ ಉಚಿತ ಪ್ರಯಾಣ: ಕೇಜ್ರಿವಾಲ್ ಘೋಷಣೆ

ಸರ್ಕಾರಿ ಬಸ್‌ಗಳಲ್ಲಿ ತೃತೀಯ ಲಿಂಗಿಗಳಿಗೆ ಉಚಿತ ಪ್ರಯಾಣ: ಕೇಜ್ರಿವಾಲ್ ಘೋಷಣೆ

ನವದೆಹಲಿ: ಸರ್ಕಾರಿ ಬಸ್‌ಗಳಲ್ಲಿ ಟ್ರಾನ್ಸ್ ಜೆಂಡರ್ ಸಮುದಾಯದವರು ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.

ದೆಹಲಿ ಸರ್ಕಾರವು ಟ್ರಾನ್ಸ್ಜೆಂಡರ್ ಸಮುದಾಯವು ಎದುರಿಸುತ್ತಿರುವ ಸಾಮಾಜಿಕ ನಿರ್ಲಕ್ಷ್ಯ ಪರಿಹರಿಸಲು ತನ್ನ ಸರ್ಕಾರ ಬದ್ಧ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಈ ಪ್ರಸ್ತಾವನೆಯನ್ನು ಶೀಘ್ರದಲ್ಲೇ ಸಂಪುಟ ಅಂಗೀಕರಿಸುವ ನಿರೀಕ್ಷೆಯಿದೆ, ಈ ನಿರ್ಧಾರವು ತೃತೀಯ ಲಿಂಗಿಗಳಿಗೆ ಪ್ರಯೋಜನವನ್ನು ನೀಡುತ್ತದೆ ಎಂಬ ಭರವಸೆ ಇದೆ ಎಂದು ಸಿಎಂ ಮಾಹಿತಿ ನೀಡಿದರು.

ನಮ್ಮ ಸಾಮಾಜಿಕ ಪರಿಸರದಲ್ಲಿ ಟ್ರಾನ್ಸ್‌ಜೆಂಡರ್ ಸಮುದಾಯವನ್ನು ಹೆಚ್ಚಾಗಿ ನಿರ್ಲಕ್ಷಿಸಲಾಗಿದೆ. ಅವರು ಕೂಡ ಮನುಷ್ಯರು ಮತ್ತು ಅವರಿಗೂ ಸಮಾನ ಹಕ್ಕುಗಳಿವೆ. ಈಗ ಅವರಿಗೂ ದೆಹಲಿ ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣ ಉಚಿತ ವಾಗಿರುತ್ತದೆ ಎಂದು ದೆಹಲಿ ಸಿಎಂ ತಿಳಿಸಿದ್ದಾರೆ.

Join Whatsapp
Exit mobile version