ಬೆಂಗಳೂರು: ರಾಜ್ಯದ ಎಲ್ಲ ಮಹಿಳೆಯರಿಗೆ ಸಾರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣ ಹಾಗೂ ಬಿಪಿಎಲ್, ಎಪಿಎಲ್ ಸೇರಿದಂತೆ ಯಾವುದೇ ಷರತ್ತುಗಳಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಣೆ ಮಾಡಿದ್ದಾರೆ.
ನಾಳೆ ಸಿಎಂ ಸಚಿವರ ಸಭೆ ಕರೆದಿದ್ದಾರೆ. ಸಭೆಯಲ್ಲಿ ಸಂಪೂರ್ಣ ಮಾಹಿತಿಯನ್ನು ನೀಡಲಾಗುವುದು. ನಾವು ನಮ್ಮ ಪ್ರಣಾಳಿಕೆಯಲ್ಲಿ ಯಾವುದೇ ಷರತ್ತು ಹಾಕಿಲ್ಲ. ಎಲ್ಲ ಮಹಿಳೆಯರಿಗೂ ಉಚಿತ ಪ್ರಯಾಣ ಖಚಿತ ಎಂದು ತಿಳಿಸಿದ್ದಾರೆ.
ಕೊರೋನಾ ಸಂದರ್ಭದಲ್ಲಾದ ನಷ್ಟದ ಬಗ್ಗೆ ಚರ್ಚೆ ನಡೆಸಿದ್ದೇನೆ. ನಮ್ಮ ಸಾರಿಗೆ ಇಲಾಖೆ ದೇಶದಲ್ಲೇ ಪ್ರತಿಷ್ಠಿತ ಸಂಸ್ಥೆಯಾಗಿದೆ. 4 ಸಾರಿಗೆ ನಿಗಮಗಳಿಗೆ 350ಕ್ಕೂ ಹೆಚ್ಚು ಪ್ರಶಸ್ತಿಗಳು ಬಂದಿವೆ. 4 ಸಾರಿಗೆ ನಿಗಮಗಳಲ್ಲಿ 240 ಘಟಕಗಳು ಕಾರ್ಯನಿರ್ವಹಣೆ ಮಾಡುತ್ತಿವೆ. 23,978 ವಾಹನಗಳಿವೆ, 1,04,450 ಕ್ಕೂ ಹೆಚ್ಚು ಸಿಬ್ಬಂದಿಗಳಿದ್ದಾರೆ. ನಿತ್ಯ ರಾಜ್ಯಾದ್ಯಂತ 82,51 ಲಕ್ಷ ಪ್ರಯಾಣಿಕರು ಓಡಾಡ್ತಾರೆ. ನಾಲ್ಕು ನಿಗಮಗಳ ನಿತ್ಯದ ಒಟ್ಟು ಆದಾಯ 2,31,332 ಲಕ್ಷ ರೂ. ಇದೆ ಎಂದು ತಿಳಿಸಿದ್ದಾರೆ.