Home ಟಾಪ್ ಸುದ್ದಿಗಳು SSLC ಪರೀಕ್ಷೆ-2 ವಿದ್ಯಾರ್ಥಿಗಳಿಗೆ KSRTCಯಲ್ಲಿ ಉಚಿತ ಪ್ರಯಾಣ

SSLC ಪರೀಕ್ಷೆ-2 ವಿದ್ಯಾರ್ಥಿಗಳಿಗೆ KSRTCಯಲ್ಲಿ ಉಚಿತ ಪ್ರಯಾಣ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ.

ಜೂನ್‌ 14ರಿಂದ 22ರವರೆಗೆ ಪರೀಕ್ಷೆ ನಡೆಯಲಿದ್ದು, ಆ ದಿನಗಳಂದು ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳಿಗೆ ತೆರಳುವ ಮತ್ತು ಅಲ್ಲಿಂದ ಹಿಂದಿರುಗುವ ವೇಳೆ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರಗಳನ್ನು ತೋರಿಸಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಕೆಎಸ್‌ಆರ್‌ಟಿಸಿಯ ನಗರ, ಹೊರವಲಯ, ಸಾಮಾನ್ಯ ಮತ್ತು ವೇಗದೂತ ಬಸ್‌ಗಳಲ್ಲಿ ಈ ಅವಕಾಶ ನೀಡಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

Join Whatsapp
Exit mobile version