ಬೆಂಗಳೂರು: ಜುಲೈ 19 ಹಾಗೂ 22ರಂದು SSLC ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ಮಾಡಲು ಅನುಮತಿ ನೀಡಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಈ ಆದೇಶ ಹೊರಡಿಸಿದೆ. ವಿದ್ಯಾರ್ಥಿಗಳು ತಮ್ಮ ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ ಹೋಗಲು ಮತ್ತು ವಾಪಸ್ ಬರಲು ಅನುಮತಿ ನೀಡಲಾಗಿದೆ. ಇನ್ನು, ರಸ್ತೆ ಮಧ್ಯದಲ್ಲಿ ಪರೀಕ್ಷಾ ಕೇಂದ್ರಗಳು ಇದ್ದಲ್ಲಿ ಅಲ್ಲಿಯೂ ಸಹ ಕೋರಿಕೆಯ ನಿಲುಗಡೆಗೂ ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು ಬಸ್ಸಿನಲ್ಲಿ ಪ್ರಯಾಣ ಮಾಡುವಾಗ ಕಡ್ಡಾಯವಾಗಿ ಪರೀಕ್ಷಾ ಪ್ರವೇಶ ಪತ್ರ ಹೊಂದಿರಬೇಕು ಎಂದು ಸೂಚನೆ ನೀಡಲಾಗಿದೆ.
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುವ ಅವಧಿಯಲ್ಲಿ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪರಿಕ್ಷಾ ಕೇಂದ್ರದವರೆಗೆ ನಿಗಮದ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡಲಾಗಿದ್ದು, ವಿದ್ಯಾರ್ಥಿಗಳು ಬಸ್ಸಿನಲ್ಲಿ ಪ್ರಯಾಣಿಸುವಾಗ ಕಡ್ಡಾಯವಾಗಿ ಪರೀಕ್ಷಾ ಪ್ರವೇಶ ಪತ್ರ ಹೊಂದಿರಬೇಕು ಎಂದು KSRTC ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ತಿಳಿಸಿದ್ದಾರೆ.
ಜು.19ರಂದು ಕೋರ್ ಸಬ್ಜೆಕ್ಟ್ (ಗಣಿತ, ವಿಜ್ಞಾನ, ಸಮಾಜ ವಿಜ್ಞಾನ) ಹಾಗೂ ಜು.22ರಂದು ಭಾಷಾ ವಿಷಯಗಳ ಪರೀಕ್ಷೆ ನಡೆಯಲಿದೆ.