ಚೆನ್ನೈ: ಸ್ವಾತಂತ್ರ್ಯ ಹೋರಾಟಗಾರ ಎನ್ ಶಂಕರಯ್ಯ ಅವರು ಅಲ್ಪಕಾಲದ ಅಸೌಖ್ಯದಿಂದ ಬುಧವಾರ ಬೆಳಗ್ಗೆ ಚೆನ್ನೈನ ಆಸ್ಪತ್ರೆಯಲ್ಲಿ ನಿಧನರಾದರು.
ಅವರಿಗೆ 102 ವರ್ಷ ವಯಸ್ಸಾಗಿತ್ತು.
ಕೆಲವು ದಿನಗಳ ಹಿಂದೆ ಜ್ವರದಿಂದ ಬಳಲುತ್ತಿದ್ದ ಶಂಕರಯ್ಯ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಆರೋಗ್ಯ ಸ್ಥಿತಿ ಹದಗೆಟ್ಟಿತ್ತು. ಅವರು ಬುಧವಾರ ಬೆಳಿಗ್ಗೆ 9 ಗಂಟೆಯ ನಂತರ ನಿಧನರಾದರು ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ ಮುಖಂಡರು ತಿಳಿಸಿದ್ದಾರೆ.
ಅವರ ಪಾರ್ಥಿವ ಶರೀರವನ್ನು ಚೆನ್ನೈನ ಸಿಪಿಐ-ಎಂ ಕಚೇರಿಯಲ್ಲಿರಿಸಲಾಗಿದ್ದು ಜನರಿಗೆ ಗೌರವ ಸಲ್ಲಿಸಲು ಅನುವು ಮಾಡಿಕೊಡಲಾಗುವುದು. ನವೆಂಬರ್ 16 ರಂದು ಬೆಳಿಗ್ಗೆ 10 ಗಂಟೆಗೆ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.