ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರೋನ್‌ಗೆ ಕಪಾಳಮೋಕ್ಷ!

Prasthutha|

ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರೋನ್ ಅವರಿಗೆ ಮಂಗಳವಾರ ವ್ಯಕ್ತಿಯೊಬ್ಬ ಕಪಾಳಮೋಕ್ಷ ಮಾಡಿರುವ ಘಟನೆ ನಡೆದಿದ್ದು, ಈ ಕುರಿತ ವಿಡಿಯೋ ವೈರಲ್ ಆಗಿದೆ.

https://twitter.com/imMAK02/status/1402257332029984768

ಅಧ್ಯಕ್ಷ ಮ್ಯಾಕ್ರೋನ್ ಅವರು ಭದ್ರತಾ ಸಿಬ್ಬಂದಿಯೊಂದಿಗೆ ಗುಂಪಿನ ಕಡೆ ಹೆಜ್ಜೆ ಹಾಕುತ್ತಾರೆ. ಈ ವೇಳೆ ವ್ಯಕ್ತಿಯೊಬ್ಬ ಏಕಾಏಕಿ ಕೈಯಿಂದ ಅಧ್ಯಕ್ಷರ ಕಪಾಲಕ್ಕೆ ಬಾರಿಸುತ್ತಾನೆ. ತಕ್ಷಣ ಮಧ್ಯಪ್ರವೇಶಿಸಿದ ಭದ್ರತಾ ಸಿಬ್ಬಂದಿ ಆ ವ್ಯಕ್ತಿಯನ್ನು ದೂರ ತಳ್ಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಅಲ್ಲಿನ ಮಾಧ್ಯಮ ವರದಿ ಮಾಡಿದೆ.

- Advertisement -