ಮಣಿಪುರದಲ್ಲಿ ಮುಂದುವರಿದ ಹಿಂಸಾಚಾರ; ಓರ್ವ ಮೃತ್ಯು

Prasthutha|

ಇಂಫಾಲ್: ಮಣಿಪುರದ ಖೋರೆಂಟಾಕ್ ಗ್ರಾಮದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.

- Advertisement -

ಸುಮಾರು 10 ಗಂಟೆಗೆ ಕುಕಿ-ಜೋ ಗ್ರಾಮದ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ ಎಂದು ವರದಿಯಾಗಿದೆ. ಗ್ರಾಮದ ಸ್ವಯಂಸೇವಕರು ಭಾರೀ ಗುಂಡಿನ ದಾಳಿಗೆ ಪ್ರತಿಯಾಗಿ ಪ್ರತಿದಾಳಿ ನಡೆಸಿದ್ದರಿಂದ ಮೂವತ್ತು ವರ್ಷದ ಜಂಗ್ಮಿನ್ಲುನ್ ಗಂಗ್ಟೆ ಮೃತಪಟ್ಟಿದ್ದಾರೆ.

ಆಗಸ್ಟ್ 27 ರಂದು  ಮಣಿಪುರದ ರಾಜಧಾನಿ ಇಂಫಾಲ್‌ನ ನ್ಯೂ ಲಂಬುಲೇನ್ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಗಳು ಮೂರು ಮನೆಗಳಿಗೆ ಬೆಂಕಿ ಹಚ್ಚಿದ್ದರು. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಮೇ 3 ರಂದು ಮಣಿಪುರದಲ್ಲಿ ನಡೆದ ಜನಾಂಗೀಯ ಘರ್ಷಣೆಯಿಂದ 160 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡು ನೂರಾರು ಜನರು ಗಾಯಗೊಂಡಿದ್ದಾರೆ.