ಅಮೆರಿಕದಲ್ಲಿ ಸ್ನೇಹಿತನ ಹತ್ಯೆ: ಸಹಾಯ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ ನಟಿ

Prasthutha|

ಬೆಂಗಳೂರು: ಅಮೆರಿಕದ ಸೇಂಟ್ ಲೂಯಿಸ್ ಸ್ನೇಹಿತ ಅಮರನಾಥ್ ಘೋಷ್ ಅವರನ್ನು ಅಪರಿಚಿತರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಸಹಾಯ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರಿಗೆ ಕಿರುತೆರೆ ನಟಿ ದೇವೋಲೀನಾ ಭಟ್ಟಾಚಾರ್ಯ ಮನವಿ ಮಾಡಿದ್ದಾರೆ.

- Advertisement -


ಎಕ್ಸ್/ಟ್ವಿಟರ್ ನಲ್ಲಿ ಪೋಸ್ಟ್ ಹಂಚಿಕೊಂಡಿರುವ ನಟಿ, ನನ್ನ ಸ್ನೇಹಿತ ಅಮರನಾಥ್ ಘೋಷ್ ಅವರನ್ನು ಸೇಂಟ್ ಲೂಯಿಸ್ ಅಕಾಡೆಮಿ ಬಳಿ ಮಂಗಳವಾರ ಸಂಜೆ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಅವರ ತಾಯಿ ಮೂರು ವರ್ಷಗಳ ಹಿಂದೆ ಮೃತಪಟ್ಟಿದ್ದರು. ತಂದೆಯವರು ಘೋಷ್ ಬಾಲ್ಯದಲ್ಲಿದ್ದಾಗಲೇ ತೀರಿಕೊಂಡಿದ್ದರು.


ಆರೋಪಿಯ ವಿವರಗಳು ಬಹಿರಂಗವಾಗಿಲ್ಲ. ಸ್ನೇಹಿತರನ್ನು ಬಿಟ್ಟರೆ, ಹೋರಾಟ ನಡೆಸಲು ಘೋಷ್ ಕುಟುಂಬದ ಯಾರೊಬ್ಬರೂ ಇಲ್ಲ. ಒಳ್ಳೆಯ ನೃತ್ಯಗಾರ, ಪಿಎಚ್ ಡಿ ವ್ಯಾಸಂಗ ಮಾಡುತ್ತಿದ್ದ ಘೋಷ್ ಕೋಲ್ಕತ್ತದವನು. ಸಂಜೆ ವಿಹರಿಸುತ್ತಿದ್ದ ವೇಳೆ, ಅಪರಿಚಿತನೊಬ್ಬ ಇದ್ದಕ್ಕಿದ್ದಂತೆ ಹಲವು ಬಾರಿ ಗುಂಡು ಹಾರಿಸಿದ್ದಾನೆ ಎಂದು ಬರೆದಿದ್ದಾರೆ. ಜೊತೆಗೆ ನರೇಂದ್ರ ಮೋದಿ ಹಾಗೂ ಜೈಶಂಕರ್‌ ಅವರನ್ನು ಟ್ಯಾಗ್ ಮಾಡಿರುವ ನಟಿ, ಹತ್ಯೆಗೆ ಕಾರಣವೇನು ಎಂಬುದಾದರೂ ಗೊತ್ತಾಗಬೇಕು ಎಂದು ಒತ್ತಾಯಿಸಿದ್ದಾರೆ.



Join Whatsapp