ನಟ ದರ್ಶನ್​ ಗೆ ವಂಚನೆ ಪ್ರಯತ್ನ | ನಕಲಿ ಬ್ಯಾಂಕ್​ ಸಿಬ್ಬಂದಿ ಅರೆಸ್ಟ್​

Prasthutha: July 11, 2021

ಬೆಂಗಳೂರು : ನಕಲಿ ಬ್ಯಾಂಕ್​ ಸಿಬ್ಬಂದಿ ಹೇಳಿ ನಟ ದರ್ಶನ್ ಗೆ ವಂಚನೆ ಪ್ರಯತ್ನ ನಡೆದಿದೆ.    ಅರುಣಾ ಎನ್ನುವವರು ದರ್ಶನ್​ ಬಳಿ ತೆರಳಿದ್ದರು. ನಿಮ್ಮ​ ಹೆಸರಿನಲ್ಲಿ ಲೋನ್​ಗೆ ಸ್ನೇಹಿತರು ಅರ್ಜಿ ಹಾಕಿದ್ದಾರೆ ಎಂದು ಮಹಿಳೆ ಹೇಳಿದ್ದರು. ನಾನು ಬ್ಯಾಂಕ್ ಮ್ಯಾನೇಜರ್ ಎಂದೇ ಆಕೆ ಪರಿಚಯಿಸಿಕೊಂಡಿದ್ದರು. ‘ನಿಮ್ಮ ಸ್ನೇಹಿತರಿಂದ ನಿಮ್ಮ ಶ್ಯೂರಿಟಿಯಲ್ಲಿ ಸಾಲಕ್ಕೆ ಅರ್ಜಿ ಹಾಕಿದ್ದಾರೆ. ₹25 ಕೋಟಿ ಲೋನ್‌ಗೆ ಬೇಡಿಕೆ ಇಟ್ಟಿದ್ದಾರೆ’ ಎಂದು ಅರುಣಾ ಹೆಳಿದ್ದರು. ಈ ಬಗ್ಗೆ ಪರಿಶೀಲಿಸಿದಾಗ ಲೋನ್‌ ಗೆ ಯಾರು ಅರ್ಜಿ ಸಲ್ಲಿಸಿಲ್ಲ ಎಂಬುದು ಗೊತ್ತಾಗಿದೆ.

ಎರಡು ದಿನದ ಹಿಂದೆ ನಟ ದರ್ಶನ್ ಸ್ನೇಹಿತರು ಈ ಬಗ್ಗೆ ಮೈಸೂರಿನ ಹೆಬ್ಬಾಳ ಠಾಣೆಗೆ ದೂರು ನೀಡಿದ್ದಾರೆ. ನಟ ದರ್ಶನ್​ ಸ್ನೇಹಿತರ ದೂರನ್ನು ಆಧರಿಸಿ ಮಹಿಳೆ ವಶಕ್ಕೆ ಪಡೆಯಲಾಗಿದೆ. ಸದ್ಯ ಮೈಸೂರಿನ ಎನ್​ಆರ್​​ ಎಸಿಪಿ ಕಚೇರಿಗೆ ನಟ ದರ್ಶನ್ ಹಾಗೂ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡರನ್ನು ಪೊಲೀಸರು ಕರೆಸಿದ್ದಾರೆ. ಸದ್ಯ, ಇಬ್ಬರಿಂದ ಹೇಳಿಕೆ ಪಡೆಯಲಾಗುತ್ತಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ