ಬೆಂಗಳೂರು: ಇಂದಿನಿಂದ (ಮೇ.22ರಿಂದ 24) ಮೂರು ದಿನ ವಿಧಾನಸಭಾ ಅಧಿವೇಶನ ನಡೆಯಲಿದ್ದು, ಮೊದಲ ಎರಡು ದಿನ ನೂತನ ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕೊನೆ ದಿನ ವಿಧಾನಸಭಾ ಸ್ಪೀಕರ್ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಸೋಮವಾರ ಬೆಳಿಗ್ಗೆ 11 ಗಂಟೆಗೆ ಅಧಿವೇಶನ ಆರಂಭವಾಗಲಿದೆ. ನೂತನ ಸದಸ್ಯರಿಗೆ ಹಂಗಾಮಿ ಸ್ಪೀಕರ್ ಆಗಿ ಆಯ್ಕೆಯಾಗಿರುವ ಆರ್.ವಿ ದೇಶಪಾಂಡೆಯವರು ಪ್ರಮಾಣ ವಚನ ಬೋಧನೆ ಮಾಡಲಿದ್ದಾರೆ. ವಿಧಾನಸಭೆಯ ಅವಧಿ ಮೇ 23ಕ್ಕೆ ಅಂತ್ಯವಾಗಿದ್ದು, ಈ ತಿಂಗಳು 23ರರೊಳಗೆ ಶಾಸಕರ ಪ್ರಮಾಣವಚನ ಸ್ವೀಕಾರ ಪೂರ್ಣಗೊಳ್ಳಬೇಕು. ಜುಲೈ ತಿಂಗಳಿನಲ್ಲಿ ಬಜೆಟ್ ಮಂಡಿಸಲಾಗುವುದು. ಐದು ಗ್ಯಾರಂಟಿಗಳ ಅನುಷ್ಠಾನ ಸೇರಿದಂತೆ ಸರ್ಕಾರದ ಹೊಸ ಕಾರ್ಯಕ್ರಮಗಳಿಗೆ ಅಗತ್ಯ ಅನುದಾನ ಒದಗಿಸಲಾಗುವುದು.
ಸ್ಪೀಕರ್ ಸ್ಥಾನಕ್ಕೆ ಹಿರಿಯ ನಾಯಕರಾದ ಆರ್.ವಿ ದೇಶಪಾಂಡೆ, ಹೆಚ್.ಕೆ ಪಾಟೀಲ್ ಹಾಗೂ ಟಿ.ಬಿ ಜಯಚಂದ್ರ ಹೆಸರು ಕೇಳಿ ಬಂದಿದೆ.