Home ಟಾಪ್ ಸುದ್ದಿಗಳು ಇದೇ 14ರಿಂದ ಉಪ ರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ರಾಜ್ಯ ಪ್ರವಾಸ

ಇದೇ 14ರಿಂದ ಉಪ ರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ರಾಜ್ಯ ಪ್ರವಾಸ

ಬೆಂಗಳೂರು : ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಈ ತಿಂಗಳ 14ರಿಂದ 17ರವರೆಗೆ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.


14ರಂದು ಅವರು ಬೆಂಗಳೂರಿಗೆ ಆಗಮಿಸಲಿದ್ದು, 15ರಂದು ಬೆಂಗಳೂರಿನ ಪಿಇಎಸ್ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. 16ರಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿರುವ ಅವರು, 17ರಂದು ಬೆಂಗಳೂರು ಟೆಕ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಬಾಹ್ಯಾಕಾಶ ವಿಜ್ಞಾನಿ ಯು.ಆರ್.ರಾವ್ ಉಪಗ್ರಹ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಅಂದೇ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

Join Whatsapp
Exit mobile version