Home ಕರಾವಳಿ ಪಿಲಿಕುಳದಲ್ಲಿ ಜೂ.11ರಂದು ಹಣ್ಣುಗಳ ಉತ್ಸವ

ಪಿಲಿಕುಳದಲ್ಲಿ ಜೂ.11ರಂದು ಹಣ್ಣುಗಳ ಉತ್ಸವ

ಮಂಗಳೂರು: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಇದೇ ಜೂ.11ರ ಶನಿವಾರ ಬೆಳಿಗ್ಗೆ 10 ಗಂಟೆಗೆ ನಗರದ ಮೂಡುಶೆಡ್ಡೆಯಲ್ಲಿರುವ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಅರ್ಬನ್ ಹಾಥ್ ನಲ್ಲಿ 2022ರ ಹಣ್ಣುಗಳ ಉತ್ಸವ ಹಾಗೂ ಹಲಸು ಮೇಳವನ್ನು ಆಯೋಜಿಸಲಾಗಿದೆ. ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸುವರು. ಮೂಡಬಿದ್ರೆ ಶಾಸಕರಾದ ಉಮಾನಾಥ ಎ. ಕೋಟ್ಯಾನ್ ಅಧ್ಯಕ್ಷತೆ ವಹಿಸುವರು.


ಮುಖ್ಯ ಅತಿಥಿಗಳಾಗಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಸಂಸದ ನಳಿನ್ ಕುಮಾರ್ ಕಟೀಲ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರಾದ ಯು.ಟಿ. ಖಾದರ್, ಭರತ್ ಶೆಟ್ಟಿ, ವೇದವ್ಯಾಸ್ ಕಾಮತ್, ರಾಜೇಶ್ ನಾಯಕ್, ಸಂಜೀವ ಮಠಂದೂರು, ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯರಾದ ಬಿ.ಎಂ. ಫಾರೂಕ್, ಹರೀಶ್ ಕುಮಾರ್, ಆಯನೂರು ಮಂಜುನಾಥ್, ಎಸ್.ಎಲ್. ಭೋಜೇಗೌಡ, ಪ್ರತಾಪ ಸಿಂಹ ನಾಯಕ್, ಮಂಜುನಾಥ್ ಭಂಡಾರಿ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಸಂತೋಷ್ ರೈ ಬೋಳಿಯಾರ್, ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವೀಂದ್ರ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ, ಮೂಡುಶೆಡ್ಡೆ ಗ್ರಾಮ ಪಂಚಾಯತ್ನ ಅಧ್ಯಕ್ಷೆ ಜಯಶ್ರೀ ಭಾಗವಹಿಸುವರು.

Join Whatsapp
Exit mobile version