Home ಕರಾವಳಿ ಪಿಲಿಕುಳದಲ್ಲಿ ಜೂ.24ರಿಂದ ‘ಹಣ್ಣುಗಳ ಉತ್ಸವ ಹಾಗೂ ಹಲಸು ಮೇಳ’

ಪಿಲಿಕುಳದಲ್ಲಿ ಜೂ.24ರಿಂದ ‘ಹಣ್ಣುಗಳ ಉತ್ಸವ ಹಾಗೂ ಹಲಸು ಮೇಳ’

ಮಂಗಳೂರು: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಅರ್ಬನ್ ಹಾಥ್‍ನಲ್ಲಿ ಜೂ.24 ಹಾಗೂ 25ರಂದು ‘ಹಣ್ಣುಗಳ ಉತ್ಸವ ಹಾಗೂ ಹಲಸು ಮೇಳ’ ವನ್ನು ಬೆಳಿಗ್ಗೆ 9ರಿಂದ ಸಂಜೆ 6 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ.

ಪ್ರಾದೇಶಿಕ ಹಲಸು, ಮಾವು ಹಾಗೂ ಇತರೆ ಹಣ್ಣುಗಳಲ್ಲದೆ ರಾಜ್ಯದ ನಾನಾ ಕಡೆಯ ಮೌಲ್ಯವರ್ಧಿತ ಹಣ್ಣುಗಳನ್ನು ಬೆಳೆಗಾರರೇ ತಂದು ಪ್ರದರ್ಶಿಸಿ ಮಾರಾಟ ಮಾಡುವ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ, ಔಷಧೀಯ ಸಸಿಗಳು, ಕಸಿ ಗಿಡಗಳು, ಬೀಜಗಳು, ಸಾವಯವ ಬಳಗದ ವಿವಿಧ ಆಹಾರ ಮತ್ತಿತರ ಪದಾರ್ಥಗಳು, ಬೇರೆ ಬೇರೆ ಹಣ್ಣುಗಳ ವಿವಿಧ ಖಾದ್ಯಗಳು ಹಾಗೂ ಪಾನೀಯಗಳ ಪ್ರದರ್ಶನ ಹಾಗೂ ಮಾರಾಟ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬಹುದು.

ಕಾರ್ಯಕ್ರಮದಲ್ಲಿ ರಾಜ್ಯ ವಿಧಾನಸಭೆಯ ಸಭಾಪತಿಗಳಾದ ಯು.ಟಿ. ಖಾದರ್ ಅವರು ಘನ ಉಪಸ್ಥಿತಿ ವಹಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಕಾರ್ಯಕ್ರಮ ಉದ್ಘಾಟಿಸುವರು.

ಶಾಸಕ ಉಮನಾಥ್ ಎ. ಕೋಟ್ಯಾನ್ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್, ರಾಜ್ಯಸಭಾ ಸದಸ್ಯರಾದ ಡಿ. ವಿರೇಂದ್ರ ಹೆಗ್ಗಡೆ, ಶಾಸಕರಾದ ಡಾ. ಭರತ್ ಶೆಟ್ಟಿ ವೈ, ಹರೀಶ್ ಪೂಂಜ, ರಾಜೇಶ್ ನಾಯ್ಕ್ ಯು, ವೇದವ್ಯಾಸ್ ಕಾಮತ್, ಅಶೋಕ್ ಕುಮಾರ್ ರೈ, ಭಾಗೀರಥಿ ಮುರುಳ್ಯ, ವಿಧಾನ ಪರಿಷತ್ ಶಾಸಕರಾದ ಕೋಟ ಶ್ರೀನಿವಾಸ್ ಪೂಜಾರಿ, ಬಿ.ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಎಸ್.ಎಲ್ ಭೋಜೇಗೌಡ, ಪ್ರತಾಪಸಿಂಹ ನಾಯಕ್.ಕೆ, ಮಂಜುನಾಥ ಭಂಡಾರಿ ಹಾಗೂ ಮಂಗಳೂರು ಮೇಯರ್ ಜಯಾನಂದ ಅಂಚನ್, ಮೂಡುಶೆಡ್ಡೆ ಗ್ರಾಮ ಪಂಚಾಯತ್‍ನ ಅಧ್ಯಕ್ಷೆಯಾದ ಜಯಶ್ರೀ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಹೆಚ್ಚಿನ ಮಾಹಿತಿಗೆ ಮೊ. ಸಂಖ್ಯೆ : 7349212817, 9686673237 ಮತ್ತು 9480229764 ಅನ್ನು ಸಂಪರ್ಕಿಸಬಹುದು ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join Whatsapp
Exit mobile version