Home ಟಾಪ್ ಸುದ್ದಿಗಳು ಪ್ರಜ್ವಲ್ ರೇವಣ್ಣ ಸರ್ಕಾರಿ ನಿವಾಸಕ್ಕೆ FSL ತಂಡ ಭೇಟಿ

ಪ್ರಜ್ವಲ್ ರೇವಣ್ಣ ಸರ್ಕಾರಿ ನಿವಾಸಕ್ಕೆ FSL ತಂಡ ಭೇಟಿ

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ನಗರದ ಸಂಸದರ ನಿವಾಸಕ್ಕೆ ಎಫ್ಎಸ್ಎಲ್ ತಂಡ ಭೇಟಿ ನೀಡಿದ್ದು, ಸಾಕ್ಷ್ಯ ಸಂಗ್ರಹ ಮಾಡುತ್ತಿದೆ.

ನಗರದ ಆರ್.ಸಿ.ರಸ್ತೆಯಲ್ಲಿರುವ ಸಂಸದರ ನಿವಾಸಕ್ಕೆ ಹಾಕಿದ್ದ ಬೀಗವನ್ನು ಸ್ಥಳೀಯ ಪೊಲೀಸರ ಸಮ್ಮುಖದಲ್ಲಿ ತೆರೆದು ಎಫ್ಎಸ್ಎಲ್ ತಂಡ ಒಳಪ್ರವೇಶಿಸಿ ಸಾಕ್ಷ್ಯಕ್ಕಾಗಿ ಹುಡುಕಾಟ ಆರಂಭಿಸಿದೆ.

ಎಂಪಿ ಕ್ವಾರ್ಟರ್ಸ್ ಎದುರು ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Join Whatsapp
Exit mobile version