ಹೊಸದಿಲ್ಲಿ: 7ನೇ ದಿನವೂ ದೇಶಾದ್ಯಂತ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ದಾಖಲೆ ಮಟ್ಟದಲ್ಲಿ ಏರಿಕೆ ಕಂಡಿದ್ದು, ಇಂದೂ ಕೂಡ ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ 35 ಪೈಸೆ ಹೆಚ್ಚಿಸಲಾಗಿದೆ.
35 ಪೈಸೆ ಏರಿಕೆಯೊಂದಿಗೆ ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 110.04 ರೂಪಾಯಿ ಹಾಗೂ ಡೀಸೆಲ್ ದರ 98.42 ರೂಪಾಯಿ ಇದೆ.ವಾಣಿಜ್ಯ ನಗರಿ ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 115.85 ಕ್ಕೆ ಹಾಗೂ ಲೀಟರ್ ಡೀಸೆಲ್ 106.62 ರೂ. ಗೆ ಮಾರಾಟವಾಗುತ್ತಿದೆ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ110.49 ಕ್ಕೆ ಏರಿಕೆಯಾಗಿದ್ದು, ಪ್ರತಿ ಲೀಟರ್ ಡೀಸೆಲ್ ದರ 101.56 ರೂ. ಗೆ ಏರಿಕೆಯಾಗಿದೆ. ಚೆನ್ನೈನಲ್ಲಿ ಪ್ರತಿ ಲೀಟರ್ಗೆ ಪೆಟ್ರೋಲ್ಗೆ 106.66 ರೂ. ಇದ್ದು, ಲೀಟರ್ ಡೀಸೆಲ್ 102.59 ಕ್ಕೆ ಲಭ್ಯವಿದೆ.
ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 113.93 ಕ್ಕೆ ಏರಿಕೆಯಾಗಿದ್ದು, ಪ್ರತಿ ಲೀಟರ್ ಡೀಸೆಲ್ ದರ 104.05 ರೂ. ಗೆ ಏರಿಕೆಯಾಗಿದೆ.
ಭಾರತ್ ಪೆಟ್ರೋಲಿಯಂ, ಇಂಡಿಯನ್ ಆಯಿಲ್ ಮತ್ತು ಹಿಂದುಸ್ತಾನ್ ಪೆಟ್ರೋಲಿಯಂ ಸೇರಿದಂತೆ ತೈಲ ಕಂಪನಿಗಳು ಅಬಕಾರಿ ಸುಂಕಗಳ ಆಧಾರದ ಮೇಲೆ ಇಂಧನ ದರವನ್ನು ಹೆಚ್ಚಿಸುತ್ತಿರುತ್ತವೆ.