Home ಟಾಪ್ ಸುದ್ದಿಗಳು ಜಮ್ಮು ಮತ್ತು ಕಾಶ್ಮೀರಕ್ಕೆ ಸಂಪೂರ್ಣ ರಾಜ್ಯ ಸ್ಥಾನಮಾನ, ಶೀಘ್ರದಲ್ಲೇ ಚುನಾವಣೆ: ಮೋದಿ

ಜಮ್ಮು ಮತ್ತು ಕಾಶ್ಮೀರಕ್ಕೆ ಸಂಪೂರ್ಣ ರಾಜ್ಯ ಸ್ಥಾನಮಾನ, ಶೀಘ್ರದಲ್ಲೇ ಚುನಾವಣೆ: ಮೋದಿ

ಉಧಂಪುರ: ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ನಡೆಯುವ ಸಮಯ ದೂರವಿಲ್ಲ. ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಸಿಗಲಿದೆ. ನಿಮ್ಮ ಕನಸುಗಳನ್ನು ನಿಮ್ಮ ಶಾಸಕರು ಮತ್ತು ನಿಮ್ಮ ಮಂತ್ರಿಗಳೊಂದಿಗೆ ಹಂಚಿಕೊಳ್ಳಲು ನಿಮಗೆ ಸಾಧ್ಯವಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಉಧಂಪುರದಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಜಮ್ಮು ಮತ್ತು ಕಾಶ್ಮೀರದ ಜನರ ದೀರ್ಘಕಾಲದ ಕಷ್ಟಗಳನ್ನು ಕೊನೆಗೊಳಿಸುವ ಭರವಸೆಯನ್ನು ಈಡೇರಿಸಿದ್ದೇನೆ ಮತ್ತು ಸಂವಿಧಾನದ 370 ನೇ ವಿಧಿಯನ್ನು ಮರಳಿ ತರಲು ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳಿಗೆ ಸವಾಲು ಹಾಕಿದರು.

ಮುಂಬರುವ ಲೋಕಸಭಾ ಚುನಾವಣೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ, ದಾಳಿ, ಕಲ್ಲು ತೂರಾಟ ಮತ್ತು ಗಡಿಯಾಚೆಗಿನ ಗುಂಡಿನ ದಾಳಿಯ ಭಯವಿಲ್ಲದೆ ನಡೆಯಲಿದೆ ಎಂದು ಅವರು ಹೇಳಿದರು.

Join Whatsapp
Exit mobile version