ಹೊಸಬರಿಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ಜಪಾನ್ ಪ್ರಧಾನಿ ಹುದ್ದೆಗೆ ರಾಜೀನಾಮೆ: ಪುಮಿಯೊ ಕಿಶಿದಾ

Prasthutha|

ಟೋಕಿಯೊ: ಆಡಳಿತಾರೂಢ ಲಿಬರಲ್ ಡೆಮಾಕ್ರಟಿಕ್ ಪಕ್ಷದ (ಎಲ್ ಡಿಪಿ) ಅಧ್ಯಕ್ಷರಾಗಿ ಮರು ಆಯ್ಕೆ ಬಯಸದಿರಲು ನಿರ್ಧರಿಸಿರುವುದಾಗಿ ಜಪಾನ್ ಪ್ರಧಾನಿ ಪುಮಿಯೊ ಕಿಶಿದಾ ಬುಧವಾರ ತಿಳಿಸಿದ್ದಾರೆ.

- Advertisement -


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹೊಸಬರಿಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ಸೆಪ್ಟೆಂಬರ್ನಲ್ಲಿ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡುತ್ತೇನೆ’ ಎಂದು ಹೇಳಿದ್ದಾರೆ.


ನನ್ನ ಅಧಿಕಾರಾವಧಿ ಸೆಪ್ಟೆಂಬರ್ ನಲ್ಲಿ ಕೊನೆಗೊಳ್ಳಲಿದ್ದು, ಅಲ್ಲಿಯವರೆಗೆ ದೇಶದ ಅಭಿವೃದ್ಧಿಗೆ ಪೂರಕವಾಗಿ ಮಾಡಬಹುದಾದ ಎಲ್ಲ ಕೆಲಸಗಳನ್ನು ಮಾಡುತ್ತೇನೆ ಎಂದಿದ್ದಾರೆ.

- Advertisement -


ಪುಮಿಯೊ ಕಿಶಿದಾ ನೇತೃತ್ವದ ಸರ್ಕಾರ ಬೆಲೆ ಏರಿಕೆ ಸೇರಿದಂತೆ ಹಲವು ಹಗರಣಗಳ ಆರೋಪವನ್ನು ಎದುರಿಸುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.



Join Whatsapp