Home ಟಾಪ್ ಸುದ್ದಿಗಳು ಶೇಖ್ ಹಸೀನಾಗೆ ಮತ್ತಷ್ಟು ಸಂಕಟ: ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು

ಶೇಖ್ ಹಸೀನಾಗೆ ಮತ್ತಷ್ಟು ಸಂಕಟ: ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು

ಢಾಕಾ: ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ಅನ್ನು ಮಧ್ಯಂತರ ಸರ್ಕಾರ ರದ್ದುಗೊಳಿಸಿದೆ.

ಶೇಖ್ ಹಸೀನಾ ವಿರುದ್ಧ ಇಲ್ಲಿಯವರೆಗೆ 44 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ ಎಂದು ಪಾಸ್ ಪೋರ್ಟ್ ರದ್ದುಪಡಿಸಲು ಅದು ಕಾರಣ ನೀಡಿದೆ. ಇನ್ನೂ ಕೆಲವು ಪ್ರಕರಣಗಳು ದಾಖಲಾಗಬಹುದಾದ ಸಾಧ್ಯತೆ ಇದೆಯೆನ್ನಲಾಗಿದೆ.

ಮಾಜಿ ಪ್ರಧಾನಿ, ಅವರ ಸಲಹೆಗಾರರು, ಮಾಜಿ ಕ್ಯಾಬಿನೆಟ್ ಮತ್ತು ವಿಸರ್ಜನೆಗೊಂಡ ರಾಷ್ಟ್ರೀಯ ಅಸೆಂಬ್ಲಿಯ ಎಲ್ಲಾ ಸದಸ್ಯರು ಅವರು ಹೊಂದಿದ್ದ ಸ್ಥಾನಗಳ ಆಧಾರದ ಮೇಲೆ ನೀಡಲಾಗಿದ್ದ ರಾಜತಾಂತ್ರಿಕ ಪಾಸ್‌ಪೋರ್ಟ್‌ಗಳನ್ನು ಹಿಂಪಡೆಯಬೇಕು ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಶೇಖ್​ ಹಸೀನಾ ಅವರು ಆಗಸ್ಟ್​ 5 ರಿಂದ ಭಾರತದಲ್ಲಿ ನೆಲೆಸಿದ್ದು, ಬಾಂಗ್ಲಾದೇಶದಲ್ಲಿ ಹೆಚ್ಚುತ್ತಿರುವ ಹಿಂಸಾಚಾರ ಮತ್ತು ಅವರ ಸುರಕ್ಷತೆಗೆ ಬೆದರಿಕೆಗಳ ಮಧ್ಯೆ ದೆಹಲಿಯಲ್ಲಿ ಆಶ್ರಯ ಪಡೆದಿದ್ದಾರೆ.

Join Whatsapp
Exit mobile version