Home ಟಾಪ್ ಸುದ್ದಿಗಳು ಜಿ20 ಶೃಂಗಸಭೆ: ಔತಣಕೂಟಕ್ಕೆ ಮಲ್ಲಿಕಾರ್ಜುನ ಖರ್ಗೆಗಿಲ್ಲ ಆಮಂತ್ರಣ!

ಜಿ20 ಶೃಂಗಸಭೆ: ಔತಣಕೂಟಕ್ಕೆ ಮಲ್ಲಿಕಾರ್ಜುನ ಖರ್ಗೆಗಿಲ್ಲ ಆಮಂತ್ರಣ!

ಹೊಸದಿಲ್ಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ರಾಜಧಾನಿಯಲ್ಲಿ ಜಿ20 ಶೃಂಗಸಭೆ ಹಿನ್ನೆಲೆಯಲ್ಲಿ ವಿಶೇಷ ಭೋಜನಕೂಟ ಆಯೋಜಿಸಿದ್ದಾರೆ. ಇದರ ಅತಿಥಿಗಳ ಪಟ್ಟಿಯಲ್ಲಿ ಎಲ್ಲಾ ಕ್ಯಾಬಿನೆಟ್ ಮತ್ತು ಸಹಾಯಕ ಸಚಿವರು, ಎಲ್ಲಾ ಮುಖ್ಯಮಂತ್ರಿಗಳು, ಭಾರತ ಸರ್ಕಾರದ ಎಲ್ಲಾ ಕಾರ್ಯದರ್ಶಿಗಳು ಮತ್ತು ಇತರ ಗಣ್ಯ ಅತಿಥಿಗಳು ಸೇರಿದ್ದಾರೆ.

ಆದರೆ ಕಾಂಗ್ರೆಸ್ ಮುಖ್ಯಸ್ಥ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹ್ವಾನಿಸಿಲ್ಲ.

ಈ ವಿಶೇಷ ಸಮಾರಂಭಕ್ಕೆ ಮಾಜಿ ಪ್ರಧಾನಿಗಳಾದ ಡಾ.ಮನಮೋಹನ್ ಸಿಂಗ್ ಮತ್ತು ಎಚ್.ಡಿ.ದೇವೇಗೌಡರಿಗೂ ಆಹ್ವಾನ ನೀಡಲಾಗಿದೆ. ಆದರೆ, ರಾಜಕೀಯ ಪಕ್ಷಗಳ ನಾಯಕರಿಗೆ ಆಹ್ವಾನ ನೀಡಿಲ್ಲ. ಮುಖ್ಯಮಂತ್ರಿಗಳಾದ ನಿತೀಶ್ ಕುಮಾರ್, ಹೇಮಂತ್ ಸೊರೆನ್, ಮಮತಾ ಬ್ಯಾನರ್ಜಿ, ಎಂಕೆ ಸ್ಟಾಲಿನ್, ಅರವಿಂದ್ ಕೇಜ್ರಿವಾಲ್ ಮತ್ತು ಭಗವಂತ್ ಮಾನ್ ಅವರು ಔತಣಕೂಟದಲ್ಲಿ ಪಾಲ್ಗೊಳ್ಳುವುದಾಗಿ ಖಚಿತಪಡಿಸಿದ್ದಾರೆ.

Join Whatsapp
Exit mobile version