Home ಟಾಪ್ ಸುದ್ದಿಗಳು ಪೊಲೀಸರ ಮೇಲೆ ಅಟ್ಯಾಕ್: ಆರೋಪಿಯೊಂದಿಗೆ ಎಸ್ಕೇಪ್

ಪೊಲೀಸರ ಮೇಲೆ ಅಟ್ಯಾಕ್: ಆರೋಪಿಯೊಂದಿಗೆ ಎಸ್ಕೇಪ್

ಗದಗ: ಸರಣಿಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕರೆದೊಯ್ಯುತ್ತಿದ್ದ ನಾಲ್ವರು ಪೊಲೀಸರ ಮೇಲೆ ದಾಳಿ ನಡೆಸಿದ ತಂಡವೊಂದು ಆರೋಪಿಯೊಂದಿಗೆ ಪರಾರಿಯಾದ ಘಟನೆ ನಗರದ ಬೆಟಗೇರಿಯ ರೈಲ್ವೆ ಅಂಡರ್ ಬ್ರಿಡ್ಜ್ ಬಳಿ ಶುಕ್ರವಾರ ರಾತ್ರಿ ನಡೆದಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದ ಜಯನಗರದಲ್ಲಿ ನಡೆದಿದ್ದ ಸರಣಿಗಳ್ಳತನ ಪ್ರಕರಣದಲ್ಲಿ ಗಂಗಾವತಿ ಶಹರ ಪೊಲೀಸ್ ಠಾಣೆಯ ಪೊಲೀಸರು ಎಸ್.ಎಂ. ಕೃಷ್ಣ ನಗರದಲ್ಲಿ ವಾಸವಿದ್ದ ಅಮ್ಜದ್ ಅಲಿ ಇರಾನಿ‌ಯನ್ನು ವಶಕ್ಕೆ ಪಡೆದುಕೊಂಡು ಹೋಗುತ್ತಿದ್ದಾಗ ಈ ಸಿನಿಮೀಯ ಮಾದರಿ ಘಟನೆ ನಡೆದಿದೆ.

ಆರೋಪಿಯನ್ನು ವಶಕ್ಕೆ ಪಡೆಯುವ ಸಂದರ್ಭದಲ್ಲಿ ಐದಾರು ಜನರು ತಗಾದೆ ತೆಗೆದಿದ್ದಾರೆ ಎನ್ನಲಾಗಿದೆ. ನಂತರ ಪೊಲೀಸರು ತಾವು ತಂದಿದ್ದ ಇನ್ನೋವಾ ಕಾರಿನಲ್ಲಿ ಆರೋಪಿಯನ್ನು ಕರೆದುಕೊಂಡು ಹೋಗುತ್ತಿದ್ದಾಗ ಬೇಟಗೇರಿಯ ರೈಲ್ವೆ ಅಂಡರ್ ಬ್ರಿಡ್ಜ್ ನಲ್ಲಿ ಅಡ್ಡಗಟ್ಟಿದ ಕೆಲವರು, ಕಾರಿನ ಗಾಜು ಒಡೆದು ಪೊಲೀಸರ ಮೇಲೆ ಹಲ್ಲೆ ನಡೆಸಿ ಕಾರಿನಲ್ಲಿದ್ದ ಆರೋಪಿಯನ್ನು ಕರೆದುಕೊಂಡು ಪರಾರಿಯಾಗಿದ್ದಾರೆ ಎನ್ನಲಾಗಿದೆ.

Join Whatsapp
Exit mobile version