Home ಟಾಪ್ ಸುದ್ದಿಗಳು ಗದಗ: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರಿಂದ ಫೈರಿಂಗ್

ಗದಗ: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರಿಂದ ಫೈರಿಂಗ್

ದಗ: ತಂದೆಯನ್ನು ಮುಗಿಸಲು ಮನೆ ಮಗನೇ ನೀಡಿದ್ದ ಸುಪಾರಿಗೆ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಫೈರೋಜ್ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.

ಗದಗ ನಗರದ ನರಗುಂದ ರಸ್ತೆಯಲ್ಲಿ ಘಟನೆ ನಡೆದಿದೆ. ಸ್ಥಳ ಮಹಜರು ವೇಳೆ ಗದಗ ಗ್ರಾಮಾಂತರ ಪಿಎಸ್‌ಐ ಶಿವಾನಂದ ಪಾಟೀಲ್ ಅವರ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿ ಪರಾರಿಗೆ ಯತ್ನಿಸಿದ್ದ ಹಿನ್ನೆಲೆಯಲ್ಲಿ ಪಿಐ ಧೀರಜ್ ಶಿಂಧೆ ಫೈರಿಂಗ್ ಮಾಡಿದ್ದಾರೆ.

ಆರೋಪಿಯನ್ನು ನರಗುಂದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ನಂತರ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪಿಎಸ್‌ಐ ಶಿವಾನಂದ ಪಾಟೀಲ್ ತಲೆಗೆ ಗಂಭೀರ ಗಾಯವಾಗಿದ್ದು, ಚಿಕಿತ್ಸೆ ಪಡೆದುಕೊಂಡಿದ್ದಾರೆ.

ರಿಯಲ್ ಎಸ್ಟೇಟ್ ವಿಚಾರವಾಗಿ ಪ್ರಕಾಶ್ ಅವರ ಮೊದಲ ಪತ್ನಿಯ ಮಗ ವಿನಾಯಕ್ ತಂದೆಯ ಕೊಲೆಗೆ ಫೈರೋಜ್ ಖಾಜಿಗೆ 65 ಲಕ್ಷ ರೂಪಾಯಿಗೆ ಸುಪಾರಿ ನೀಡಿದ್ದ. ಮನೆಗೆ ನುಗ್ಗಿದ್ದ ಹಂತಕರು ಪ್ರಕಾಶ್ ಮಗ ಕಾರ್ತಿಕ್, ಸಂಬಂಧಿಕರಾದ ಪರಶುರಾಮ, ಲಕ್ಷ್ಮಿ, ಆಕಾಂಕ್ಷಾ ಅವರನ್ನು ಕೊಲೆ ಮಾಡಿದ್ದರು.

Join Whatsapp
Exit mobile version