ಗಾಂಧಿ ಕುಟುಂಬ ‘ಪಕ್ಷಕ್ಕಾಗಿ ತಮ್ಮ ಹುದ್ದೆಯ ತ್ಯಾಗಕ್ಕೆ’ ಸಿದ್ಧವಾಗಿತ್ತು: ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ

Prasthutha|

ನವದೆಹಲಿ: ಗಾಂಧಿ ಕುಟುಂಬದ ಸದಸ್ಯರಾದ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ, ಭಾನುವಾರ ನಡೆದ CWC ಸಭೆಯಲ್ಲಿ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡುವ ಕುರಿತು ಪ್ರಸ್ತಾಪಿಸಿದೆ. ಆದರೆ CWC ಪದಾಧಿಕಾರಿಗಳು ಇದನ್ನು ಸರ್ವಾನುಮತದಿಂದ ತಿರಸ್ಕರಿಸಿದೆ ಎಂದು ಪಕ್ಷದ ಹಿರಿಯ ಮುಖಂಡ ಅಧೀರ್ ರಂಜನ್ ಚೌಧರಿ ತಿಳಿಸಿದ್ದಾರೆ.

- Advertisement -

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋನಿಯಾ ಗಾಂಧಿ ಅವರು ತಮ್ಮ ಕುಟುಂಬದ ಸದಸ್ಯರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪಕ್ಷಕ್ಕಾಗಿ ತಮ್ಮ ಹುದ್ದೆಗಳನ್ನು ತ್ಯಾಗ ಮಾಡಲು ಸಿದ್ಧರಾಗಿದ್ದರು ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ನಡೆದ ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್’ಗೆ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ತೀವ್ರ ಕಳವಳ ವ್ಯಕ್ತಪಡಿಸಿದೆ ಎಂದು ಹೇಳಲಾಗಿದೆ.

Join Whatsapp