ಕೊಚ್ಚಿನ್: ಸಾಮೂಹಿಕ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಅಂಡಮಾನ್, ನಿಕೋಬಾರ್’ನ ಮಾಜಿ ಮುಖ್ಯ ಕಾರ್ಯದರ್ಶಿ ಜೀತೇಂದ್ರ ನಾರಾಯಣ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸ್ಥಳೀಯ ಸೆಷನ್ಸ್ ನ್ಯಾಯಾಲಯ ಗುರುವಾರ ವಜಾಗೊಳಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಸೆಷನ್ ನ್ಯಾಯಾಲಯವನ್ನು ಸಂಪರ್ಕಿಸುವಂತೆ ನಾರಾಯಣ್ ಅವರಿಗೆ ಸುಪ್ರೀಂ ಕೋರ್ಟ್ ಸೂಚಿಸಿದ್ದು, ಅಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸುವಂತೆ ನಿರ್ದೇಶನ ನೀಡಿತ್ತು.
ಪೋರ್ಟ್ ಬ್ಲೇರ್‌ನಲ್ಲಿ 21 ವರ್ಷದ ಮಹಿಳೆಯೊಬ್ಬರು ನರೇನ್ ಸೇರಿದಂತೆ ಇಬ್ಬರು ಅಧಿಕಾರಿಗಳ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಸಾಮೂಹಿಕ ಅತ್ಯಾಚಾರದ ಆರೋಪ ಮಾಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಸಂತ್ರಸ್ತೆ ನೀಡಿದ ದೂರಿನ ಆಧಾರದಲ್ಲಿ ಅಕ್ಟೋಬರ್ 1 ರಂದು ಪೋರ್ಟ್ ಬ್ಲೇರ್‌ನ ಅಬರ್ಡೀನ್ ಪೊಲೀಸ್ ಠಾಣೆಯಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಕಾರ್ಮಿಕ ಕಮಿಷನರ್ ಆಗಿ ನಿಯೋಜಿಸಲಾದ ನರೇನ್ ಮತ್ತು ಲೆಫ್ಟಿನೆಂಟ್ ಜನರಲ್ ರಿಷಿ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಈ ಆರೋಪದ ಬಗ್ಗೆ ತನಿಖೆ ನಡೆಸಲು ಪೊಲೀಸರು ವಿಶೇಷ ತನಿಖಾ ತಂಡ (ಎಸ್‌ಐಟಿ) ವನ್ನು ರಚಿಸಿದ್ದಾರೆ ಎಂದು ತಿಳಿದುಬಂದಿದೆ.
ಅಕ್ಟೋಬರ್ 20 ರಂದು ದೆಹಲಿ ಹೈಕೋರ್ಟ್ ನರೇನ್ ಅವರಿಗೆ ಅಕ್ಟೋಬರ್ 28 ರವರೆಗೆ ಬಂಧಿಸದಂತೆ ಮಧ್ಯಂತರ ಆದೇಶ ನೀಡಿತ್ತು. ಇದಾದ ಒಂದು ದಿನದ ಬಳಿಕ ನವೆಂಬರ್ 14 ರವರೆಗೆ ಈ ಅವಧಿಯನ್ನು ವಿಸ್ತರಿಸುವಂತೆ ಕೋರಿ ಅವರು ಪೋರ್ಟ್ ಬ್ಲೇರ್’ನಲ್ಲಿ ಕುಳಿತು ಕಲ್ಕತ್ತಾ ಹೈಕೋರ್ಟ್’ನ ಸರ್ಕ್ಯೂಟ್ ಬೆಂಚ್’ಗೆ ಅರ್ಜಿ ಸಲ್ಲಿಸಿದ್ದರು. ಅಕ್ಟೋಬರ್ 21ರಂದು ಈ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ಸರ್ಕ್ಯೂಟ್ ಪೀಠ, ಅವರಿಗೆ ಸ್ಪಲ್ಪ ರೀಲೀಫ್ ನೀಡಿತ್ತು ಮತ್ತು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಮುಂದೆ ಹಾಜರಾಗುವಂತೆ ಸೂಚಿಸಿತ್ತು.