Home ಟಾಪ್ ಸುದ್ದಿಗಳು ಗಂಗೊಳ್ಳಿ ಗ್ರಾಮ ಪಂಚಾಯತ್: ಅಧ್ಯಕ್ಷೆಯಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಜಯಂತಿ, ಉಪಾಧ್ಯಕ್ಷರಾಗಿ SDPIಯ ತಬ್ರೇಝ್ ಆಯ್ಕೆ

ಗಂಗೊಳ್ಳಿ ಗ್ರಾಮ ಪಂಚಾಯತ್: ಅಧ್ಯಕ್ಷೆಯಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಜಯಂತಿ, ಉಪಾಧ್ಯಕ್ಷರಾಗಿ SDPIಯ ತಬ್ರೇಝ್ ಆಯ್ಕೆ

ಕುಂದಾಪುರ: ಗಂಗೊಳ್ಳಿ ಗ್ರಾಮ ಪಂಚಾಯಿತ್ ಚುನಾವಣೆ ಫಲಿತಾಂಶ ಹೊರ ಬಿದ್ದಿದ್ದು, ಅಧ್ಯಕ್ಷೆಯಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಜಯಂತಿ, ಉಪಾಧ್ಯಕ್ಷರಾಗಿ SDPIಯ ತಬ್ರೇಝ್ ಆಯ್ಕೆಯಾಗಿದ್ದಾರೆ.
ಸುಮಾರು ಎರಡು ದಶಕಗಳಿಗೂ ಅಧಿಕ ಕಾಲ ಬಿಜೆಪಿ ಬೆಂಬಲಿತರ ಭದ್ರಕೋಟೆಯಾಗಿದ್ದ ಗಂಗೊಳ್ಳಿ ಗ್ರಾ.ಪಂನಲ್ಲಿ ಈ ಬಾರಿ ಬಿಜೆಪಿ ಬೆಂಬಲಿತರು ತೀವ್ರ ಹಿನ್ನಡೆ ಕಂಡಿದ್ದಾರೆ.


ಮುಂದಿನ ಅವಧಿಗೆ ನಡೆದಿದ್ದ ಚುನಾವಣೆಯಲ್ಲಿ ಎಸ್ ಡಿಪಿಐ ಬೆಂಬಲಿತರ ಸಹಕಾರದೊಂದಿಗೆ, ಕಾಂಗ್ರೆಸ್ ಪಕ್ಷದ ಬೆಂಬಲಿತರು ಗಂಗೊಳ್ಳಿ ಗ್ರಾಪಂ ಅಧಿಕಾರದ ಗದ್ದುಗೆ ಹಿಡಿದಿದ್ದಾರೆ.
33 ಸದಸ್ಯ ಬಲದ ಗಂಗೊಳ್ಳಿ ಗ್ರಾಪಂನಲ್ಲಿ ಕಾಂಗ್ರೆಸ್ ಬೆಂಬಲಿತರು 12 ಸ್ಥಾನಗಳಲ್ಲಿ, ಎಸ್ ಡಿಪಿಐ ಬೆಂಬಲಿತರು 7 ಸ್ಥಾನಗಳಲ್ಲಿ, ಬಿಜೆಪಿ ಬೆಂಬಲಿತರು 12 ಸ್ಥಾನಗಳಲ್ಲಿ ಜಯಗಳಿಸಿದ್ದರೆ, ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಸಹ ಗೆಲುವಿನ ನಗು ಬೀರಿದ್ದರು.


ಕಾಂಗ್ರೆಸ್ ಎಸ್ ಡಿಪಿಐನೊಂದಿಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡು ಸಂಘಟಿತ ಹೋರಾಟ ನೀಡಿರುವುದು ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಕಾರಣ ಎಂದು ವಿಶ್ಲೇಷಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Join Whatsapp
Exit mobile version