ಪರಾರಿ ಕೂಲಿ ಕಾರ್ಮಿಕರ ಬಾಲಕಿ ಮೇಲೆ ಗ್ಯಾಂಗ್ ರೇಪ್ ಕೊಲೆ ಪ್ರಕರಣ ಆರೋಪಿಗಳಿಗೆ ಗಲ್ಲುಶಿಕ್ಷೆ ಜಾರಿಗೊಳಿಸಿ: JDS ಮಹಿಳಾ ನಾಯಕಿ ಡಾ ಸುಮತಿ ಎಸ್ ಹೆಗ್ಡೆ

Prasthutha: November 25, 2021

ಮಂಗಳೂರು : ರಾಜ್ಯ, ದೇಶದ ವಿವಿಧೆಡೆ ಶಾಲಾ ಮಕ್ಕಳ ಸಹಿತ  ಅಪ್ರಾಪ್ತೆಯರ ಮೇಲೆ ಅತ್ಯಾಚಾರ ಪ್ರಕರಣಗಳು ಮೇಲಿಂದ ಮೇಲೆ ನಡೆಯುತ್ತಿರುವುದು ಕಳವಳಕಾರಿ ಸಂಗತಿ.  ಇತ್ತೀಚಿಗೆ ಪರಾರಿಯಲ್ಲಿ ಎಂಟರ ಹರೆಯದ ಮುಗ್ದ ಹುಡುಗಿಯನ್ನು ಸಾಮೂಹಿಕ ಅತ್ಯಾಚಾರ ಮಾಡಿ ಕೊಂದು ಡ್ರೈನೇಜ್ ಗೆ ಬಿಸಾಡಿದ ದುರುಳರ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತಾ ಮೃತ ಬಾಲಕಿಯ   ಕುಟುಂಬಕ್ಕೆ  ಸೂಕ್ತ ಪರಿಹಾರ ನೀಡಬೇಕು, ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಜೆಡಿಎಸ್ ನಾಯಕಿ  ಡಾ ಸುಮತಿ ಯಸ್  ಹೆಗಡೆ  ಮಂಗಳೂರು ಪತ್ರಿಕಾ ಪ್ರಕಟಣೆ ಮೂಲಕ ಆಗ್ರಹಿಸಿದರು.

ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ,ಕೊಲೆ, ದೌರ್ಜನ್ಯಗಳಿಗೆ ಕೇಂದ್ರ ಸರ್ಕಾರ ಕಡಿವಾಣ ಹಾಕಬೇಕು ಎಂದರು.         ಇತ್ತೀಚಿಗೆ ವಿದ್ಯಾರ್ಥಿನಿಯರ ಮೇಲೆ, ಮಹಿಳೆಯರ ಮೇಲೆ ಹಲ್ಲೆ, ಅತ್ಯಾಚಾರ, ದೌರ್ಜನ್ಯದಂತಹ ಪ್ರಕರಣಗಳು ಹೆಚ್ಚುತ್ತಿದ್ದು, ಜಿಲ್ಲಾಡಳಿತ ಹಾಗೂ ತಾಲೂಕಾಡಳಿತ ವಿದ್ಯಾರ್ಥಿನಿಯರಿಗೆ, ಮಹಿಳೆಯರಿಗೆ ಸೂಕ್ತ ರಕ್ಷಣೆ ಒದಗಿಸಬೇಕು. ಶಾಲಾ-ಕಾಲೇಜು, ಕಾರ್ಖಾನೆ ಜನ ನಿಭಿಡ ಪ್ರದೇಶಗಳಲ್ಲಿ  ಬಸ್ ನಿಲ್ದಾಣಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಬೇಕು ಹಾಗೂ ಪೋಲಿಸ್ ಸಿಬ್ಬಂದಿಯನ್ನು ಬಸ್ ನಿಲ್ದಾಣ ಮತ್ತು ನಗರ ಪ್ರದೇಶದಿಂದ ದೂರವಿರುವ ಕಾಲೇಜುಗಳ ಬಳಿ ನಿಯೋಜನೆ ಮಾಡುವಂತೆ ಒತ್ತಾಯಿಸಿದರು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!