ಕೋರ್ಟ್ ನಲ್ಲೇ ಗ್ಯಾಂಗ್ ಸ್ಟರ್ ಮುಖ್ತಾರ್ ಅನ್ಸಾರಿ ಆಪ್ತ ಸಂಜೀವ್ ಜೀವಾ ಹತ್ಯೆ

Prasthutha|

ಲಖನೌ: ಗ್ಯಾಂಗ್ ಸ್ಟರ್ ಮುಖ್ತಾರ್ ಅನ್ಸಾರಿ ಆಪ್ತ ಸಂಜೀವ್ ಜೀವಾ ಎನ್ನುವರನ್ನು ಲಖನೌ ಜಿಲ್ಲಾ ನ್ಯಾಯಾಲಯದಲ್ಲಿ ವಕೀಲರ ವೇಷದಲ್ಲಿ ಬಂದಿದ್ದ ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿದ್ದಾರೆ.

- Advertisement -


ಈ ವೇಳೆ ಕೋರ್ಟ್ ಹಾಲ್ ನಲ್ಲಿದ್ದ ಕೆಲ ಪೊಲೀಸರಿಗೂ ಗಾಯಗಳಾಗಿದ್ದು ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.


1991ರ ಅವಧೇಶ್ ರಾಯ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಮಾಜಿ ಶಾಸಕ, ಗ್ಯಾಂಗ್ ಸ್ಟರ್ ಮುಖ್ತಾರ್ ಅನ್ಸಾರಿ ತಪ್ಪಿತಸ್ಥ ಎಂದು ವಾರಾಣಸಿಯ ಸಂಸದರು ಶಾಸಕರ ನ್ಯಾಯಾಲಯ ಇತ್ತೀಚೆಗಷ್ಟೇ ತೀರ್ಪು ನೀಡಿ, ಜೀವಾವಧಿ ಶಿಕ್ಷೆ ವಿಧಿಸಿತ್ತು.

Join Whatsapp