Home ಟಾಪ್ ಸುದ್ದಿಗಳು ದರೋಡೆಕೋರ-ಭಯೋತ್ಪಾದಕ ನಂಟು ಪ್ರಕರಣ: ದೇಶದೆಲ್ಲೆಡೆ ದಾಳಿ ನಡೆಸಿದ ಎನ್ ಐಎ

ದರೋಡೆಕೋರ-ಭಯೋತ್ಪಾದಕ ನಂಟು ಪ್ರಕರಣ: ದೇಶದೆಲ್ಲೆಡೆ ದಾಳಿ ನಡೆಸಿದ ಎನ್ ಐಎ

ನವದೆಹಲಿ: ದರೋಡೆಕೋರ-ಭಯೋತ್ಪಾದಕ ಜಾಲ ಬೆನ್ನತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ ಐಎ) ಮಂಗಳವಾರ ಬೆಳಿಗ್ಗೆ ದೆಹಲಿ, ಹರಿಯಾಣ ಮತ್ತು ಇತರ ರಾಜ್ಯಗಳಲ್ಲಿ ದಾಳಿ ಪ್ರಾರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಪ್ರದೇಶ, ಪಂಜಾಬ್, ರಾಜಸ್ಥಾನ ಮತ್ತು ಹರಿಯಾಣವನ್ನು ಒಳಗೊಂಡಂತೆ  ದೆಹಲಿಯ ಆರಕ್ಕೂ ಹೆಚ್ಚು ಜಿಲ್ಲೆಗಳಲ್ಲಿನ ದರೋಡೆಕೋರರಿಗೆ ಸಂಬಂಧಿಸಿದ ವಸತಿ ಮತ್ತು ಇತರ ಸ್ಥಳಗಳಲ್ಲಿ ದಾಳಿಗಳನ್ನು ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಕಳೆದ ವಾರ ಲಾರೆನ್ಸ್ ಬಿಷ್ಣೋಯ್, ನವೀನ್ ದಬಾಸ್ ಮತ್ತು ಸುನಿಲ್ ಬಲಿಯಾನ್ ಅಲಿಯಾಸ್ ಟಿಲ್ಲು ತಾಜ್ಪುರಿಯಾ ಎಂಬ ಮೂವರು ದರೋಡೆಕೋರರನ್ನು ಕಸ್ಟಡಿಗೆ ತೆಗೆದುಕೊಂಡಿದ್ದ ಎನ್ ಐಎ, ಅವರನ್ನು ವಿಚಾರಣೆ ನಡೆಸಿದ ನಂತರ ಈ ಶೋಧಗಳನ್ನು ಯೋಜಿಸಲಾಗಿದೆ.         

ಕಳೆದ ತಿಂಗಳು, ನೆಕ್ಸಸ್ ನ ತನಿಖೆಯನ್ನು ತೀವ್ರಗೊಳಿಸುವ ಪ್ರಯತ್ನದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಇದೇ ರೀತಿ ದಾಳಿ ನಡೆಸಿತ್ತು. ಪಂಜಾಬ್, ಹರಿಯಾಣ ಮತ್ತು ರಾಜಸ್ಥಾನದಲ್ಲಿ ಇತರ ರಾಜ್ಯಗಳಲ್ಲಿನ 50ಕ್ಕೂ ಅಧಿಕ ಸ್ಥಳಗಳಲ್ಲಿ ದಾಳಿ ನಡೆಸಿ ದರೋಡೆಕೋರರಿಗೆ ಭಯೋತ್ಪಾದಕರು ಮತ್ತು ಮಾದಕವಸ್ತು ಕಳ್ಳ ಸಾಗಣೆದಾರರೊಂದಿಗಿನ ಸಂಪರ್ಕದ ಬಗ್ಗೆ ವಿವರಗಳನ್ನು ಪಡೆದಿತ್ತು. ರಾಜಸ್ಥಾನದಲ್ಲಿ, ಚುರುವಿನ ಸಂಪತ್ ನೆಹ್ರಾ ಅವರಿಗೆ ಸೇರಿದ ಸ್ಥಳಗಳಲ್ಲಿ ದಾಳಿ ವರದಿಯಾಗಿದೆ. ಪಂಜಾಬ್ ನಲ್ಲಿ ವಕೀಲ ಗುರುಪ್ರೀತ್ ಸಿಂಗ್ ಸಿಧು, ಕಬಡ್ಡಿ ಪ್ರವರ್ತಕ ಜಗ್ಗಾ ಜಾಂಡಿಯನ್ ಮತ್ತು ಆರೋಪಿತ ದರೋಡೆಕೋರ ಜಮನ್ ಸಿಂಗ್ ಅವರ ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು.

ಭಯೋತ್ಪಾದಕ ಜಾಲ ಮತ್ತು ಅವುಗಳಿಗೆ ಧನಸಹಾಯ ಮತ್ತು ಮೂಲಸೌಕರ್ಯಗಳನ್ನು ಒದಗಿಸುತ್ತಿರುವವರನ್ನು ಪತ್ತೆ ಮಾಡಲು ಈ ದಾಳಿ ನಡೆಯುತ್ತಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

Join Whatsapp
Exit mobile version