Home ಟಾಪ್ ಸುದ್ದಿಗಳು ಹಾಸನ ಜೈಲಿನಲ್ಲಿ ಗಾಂಜಾ, ಮೊಬೈಲ್ ಪತ್ತೆ: ನಾಲ್ವರು ಅಧಿಕಾರಿಗಳ ಅಮಾನತು

ಹಾಸನ ಜೈಲಿನಲ್ಲಿ ಗಾಂಜಾ, ಮೊಬೈಲ್ ಪತ್ತೆ: ನಾಲ್ವರು ಅಧಿಕಾರಿಗಳ ಅಮಾನತು

ಹಾಸನ: ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರು ದಾಳಿ ನಡೆಸಿ ಗಾಂಜಾ ಹಾಗೂ ಮೊಬೈಲ್ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಾಗೃಹದ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.


ಹಾಸನ ಉಪಕಾರಾಗೃಹದ ಪೊಲೀಸ್ ಅಧೀಕ್ಷಕ ಸುರೇಶ್, ಜೈಲರ್ ಖುತುಬುದ್ದೀನ್ ದೇಸಾಯಿ, ಜಾದವ್ ಹಾಗೂ ಪಾಟೀಲ್ ಅಮಾನತಾದ ಅಧಿಕಾರಿಗಳಾಗಿದ್ದಾರೆ.


ಜಿಲ್ಲಾ ಕಾರಾಗೃಹದ ಮೇಲೆ ಇತ್ತೀಚೆಗೆ ಪೊಲೀಸರು ದಾಳಿ ಮಾಡಿದ್ದರು. ಈ ವೇಳೆ ಮೊಬೈಲ್, ಗಾಂಜಾ, ಸಿಗರೇಟ್, ಬಿಡಿ ಮತ್ತು ಮೊಬೈಲ್ ಚಾರ್ಜರ್ ಗಳು ಪತ್ತೆಯಾಗಿದ್ದವು. ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳನ್ನು ಕಾರಾಗೃಹ ಪೊಲೀಸ್ ಮಹಾನಿರ್ದೇಶಕರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

Join Whatsapp
Exit mobile version