ಗಣಪತಿ ವಿಸರ್ಜನೆಗೆ ಹೋದ ನೀರಗಂಟಿ ಕೆರೆಯಲ್ಲಿ ಮುಳುಗಿ ಸಾವು

Prasthutha|

ಹಾಸನ: ಗಣಪತಿ ವಿಸರ್ಜನೆ ವೇಳೆ ವ್ಯಕ್ತಿಯೊಬ್ಬ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಸಕಲೇಶಪುರ ತಾಲೂಕಿನಲ್ಲಿ ನಡೆದಿದೆ.

- Advertisement -

ಸಕಲೇಶಪುರ ತಾಲೂಕಿನ ಯಡೇಹಳ್ಳಿ ಗ್ರಾಮದ ಯತೀಶ್ (55) ನೀರಿನಲ್ಲಿ ಮುಳುಗಿ ಸಾವನ್ನಪ್ಪಿದವರು.

ಯಡೇಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ಯತೀಶ್ ಬಾಗೆ ಗಣೇಶ ಮೂರ್ತಿ ವಿಸರ್ಜನೆ ವೇಳೆ  ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

- Advertisement -

ಯತೀಶ್ ಶವಕ್ಕಾಗಿ ಅಗ್ನಿಶಾಮಕ ದಳದಿಂದ ಶೋಧಕಾರ್ಯ ಮುಂದುವರಿಸಿದ್ದಾರೆ. ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

Join Whatsapp