ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ಐವರು ಮಕ್ಕಳು ಸಜೀವ ದಹನ

Prasthutha|

ಪಾಟ್ನಾ: ಸಿಲಿಂಡರ್ ಸ್ಪೋಟಗೊಂಡು ಒಂದೇ ಕುಟುಂಬದ ಐವರು ಮಕ್ಕಳು ಸಜೀವ ದಹನವಾಗಿರುವ ದಾರುಣ ಘಟನೆ ಬಿಹಾರದ ಬಂಕಾ ಜಿಲ್ಲೆಯ ರಾಜಾವರ್ ಗ್ರಾಮದಲ್ಲಿ ನಡೆದಿದೆ.

- Advertisement -

ದುರಂತದಲ್ಲಿ ಮೃತಪಟ್ಟ ಮಕ್ಕಳನ್ನು ಅಂಕುಶ್(12), ಅಂಶುಕುಮಾರಿ(8), ಶಿವಾನಿ(6), ಸೀಮಾ(4), ಸೋನಿ(3) ಎಂದು ಗುರುತಿಸಲಾಗಿದೆ.
ಅಡುಗೆ ಮಾಡುತ್ತಿದ್ದ ಮನೆಯ ಯಜಮಾನ ಛೋಟಾ ಪಾಸ್ವಾನ್ ಎಂಬವರು ಅರ್ಧದಲ್ಲೇ ಬಿಟ್ಟು ಹೊರಗೆ ಹೋಗಿದ್ದರು. ಇದೇ ವೇಳೆಯಲ್ಲಿ ಮನೆಯಲ್ಲಿ ಸಿಲಿಂಡರ್ ಸ್ಪೋಟವಾಗಿದ್ದು, ಸ್ಥಳದಲ್ಲಿ ಆಟವಾಡುತ್ತಿದ್ದ ಮಕ್ಕಳು ಸುಟ್ಟು ಕರಕಲಾಗಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಸ್ಥಳಕ್ಕೆ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



Join Whatsapp