Home Uncategorized ಗ್ಯಾಸ್ ಸಿಲಿಂಡರ್ ಸ್ಫೋಟ; 10 ಮಂದಿಗೆ ಗಾಯ

ಗ್ಯಾಸ್ ಸಿಲಿಂಡರ್ ಸ್ಫೋಟ; 10 ಮಂದಿಗೆ ಗಾಯ

ಮೈಸೂರು: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಸುಮಾರು 10 ಮಂದಿ ಗಾಯಗೊಂಡಿರುವ ಘಟನೆ ಬನ್ನಿಮಂಟಪದ ಅಗ್ನಿಶಾಮಕ ವಸತಿ ಸಮುಚ್ಚಯದ ಮನೆಯೊಂದರಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.

ವಸತಿ ಸಮುಚ್ಚಯದ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿದ್ದು, ಬೆಳಗ್ಗೆ ಎದ್ದು ಹಾಲು ಕಾಯಿಸಲು ಬೆಂಕಿ ಹಚ್ಚುವ ವೇಳೆ ಸಿಲಿಂಡರ್ ಸ್ಫೋಟಗೊಂಡು ಅಕ್ಕಪಕ್ಕದ ಮನೆಯವರಿಗೂ ಬೆಂಕಿ ತಗುಲಿ 10 ಮಂದಿ ಗಾಯಗೊಂಡಿದ್ದಾರೆ.

ಘಟನೆಯಲ್ಲಿ ಒಂದೇ ಮನೆಯ ನಾಲ್ವರು ಹಾಗೂ ಅಕ್ಕಪಕ್ಕದ 6 ಮಂದಿಗೆ ಗಾಯಗಳಾಗಿದೆ. ಅವರಲ್ಲಿ ಇಬ್ಬರು ಮಕ್ಕಳಿದ್ದು, ಓರ್ವ 6 ವರ್ಷ ಹಾಗೂ ಇನ್ನೋರ್ವ 10 ವರ್ಷದ ಬಾಲಕ. 6 ಮಂದಿ ಗಾಯಳುಗಳ ಪೈಕಿ ಓರ್ವನಿಗೆ ಗಂಭೀರ ಗಾಯಗಳಾಗಿದ್ದು, ದೇಹದ ಕೆಲ ಭಾಗ ಸುಟ್ಟುಹೋಗಿದೆ.

ಗಾಯಾಳುಗಳನ್ನು ಸಮೀಪದ ಸೈಂಟ್ ಜೋಸೆಫ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ವೆಂಟಿಲೇಟರ್’ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Join Whatsapp
Exit mobile version