ಗ್ಯಾಸ್ ಗೀಸರ್ ಸೋರಿಕೆ: ಉಸಿರುಗಟ್ಟಿ ದಂಪತಿ ಮೃತ್ಯು; ಮಗು ಆಸ್ಪತ್ರೆಗೆ ದಾಖಲು

Prasthutha|

ಜೈಪುರ: ಗ್ಯಾಸ್ ಗೀಸರ್ ಸೋರಿಕೆಯಿಂದ ಉಸಿರುಗಟ್ಟಿ ದಂಪತಿ ಮೃತಪಟ್ಟು, 5 ವರ್ಷದ ಮಗು ಆಸ್ಪತ್ರೆಗೆ ದಾಖಲಾಗಿರುವ ದಾರುಣ ಘಟನೆ ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ನಡೆದಿದೆ.

- Advertisement -


ಶಹಾಪುರ ನಿವಾಸಿಗಳಾದ ಶಿವನಾರಾಯಣ ಜಾನ್ವಾರ್ (37), ಅವರ ಪತ್ನಿ ಕವಿತಾ ಜಾನ್ವರ್ (35) ಮೃತ ದಂಪತಿ.


ಶೀತಲ ಅಷ್ಟಮಿ ಹಬ್ಬದ ಪ್ರಯುಕ್ತ ಕುಟುಂಬ ಸದಸ್ಯರೊಂದಿಗೆ ದಂಪತಿ ಬಣ್ಣದಲ್ಲಿ ಆಡಿದ್ದರು. ಅದಾದ ಬಳಿಕ ಬಣ್ಣವನ್ನು ತೊಳೆಯಲು ತಮ್ಮ 5 ವರ್ಷದ ಮಗನನ್ನು ಕರೆದುಕೊಂಡು ದಂಪತಿ, ಬಾತ್ ರೂಮ್’ಗೆ ತೆರಳಿದ್ದಾರೆ. ಈ ವೇಳೆ ಗೀಸರ್ ಆನ್ ಮಾಡಿದ್ದಾರೆ. ಕೆಲವೇ ಕ್ಷಣದಲ್ಲಿ ಗೀಸರ್ ಅನಿಲ ಸೋರಿಕೆಯಾಗಿದೆ. ಏಕಾಏಕಿ ಗೀಸರ್ ಗ್ಯಾಸ್ ಲೀಕ್ ಆದ ಪರಿಣಾಮ ದಂಪತಿಗೆ ಉಸಿರುಗಟ್ಟಿ ಏನು ಮಾಡಲಾಗದ ಸ್ಥಿತಿ ನಿರ್ಮಾಣವಾಗಿದೆ. ಬಳಿಕ ಕುಟುಂಬ ಸದಸ್ಯರು ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೇ ದಂಪತಿ ಮೃತಪಟ್ಟಿದ್ದು, ಮಗು ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದು ಬಂದಿದೆ.



Join Whatsapp