ರಸಗೊಬ್ಬರ ಕಾರ್ಖಾನೆ ಘಟಕದಲ್ಲಿ ಅನಿಲ ಸೋರಿಕೆ : ಇಬ್ಬರು ಸಾವು, 15 ಮಂದಿ ಅಸ್ವಸ್ಥ

Prasthutha|

ಫೂಲ್ಪುರ್ : ಇಲ್ಲಿನ ರಸಗೊಬ್ಬರ ಕಾರ್ಖಾನೆ ಘಟಕದಲ್ಲಿ ಅನಿಲ ಸೋರಿಕೆಯುಂಟಾಗಿ ಉಸಿರುಗಟ್ಟಿ ಇಬ್ಬರು ಮೃತಪಟ್ಟು, ಸುಮಾರು 15ಕ್ಕೂ ಹೆಚ್ಚು ಮಂದಿ ಅಸ್ವಸ್ಥಕ್ಕೀಡಾಗಿರುವ ಘಟನೆ ಬುಧವಾರ ನಸುಕಿನ ಜಾವ ಸಂಭವಿಸಿದೆ.

ಫೂಲ್ ಪುರ್ ನ ಭಾರತೀಯ ರೈತ ರಸಗೊಬ್ಬರ ಸಹಕಾರಿ ಲಿಮಿಟೆಡ್(ಐಎಫ್‌ಎಫ್ ಸಿಒ)ದಲ್ಲಿ ಅನಿಲ ಸೋರಿಕೆಯಾಗಿ ಈ ದುರ್ಘಟನೆ ನಡೆದಿದ್ದು ಒಂದು ಘಟಕದ ಕಾರ್ಯಾಚರಣೆಯನ್ನು ಸದ್ಯ ಸ್ಥಗಿತಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

- Advertisement -

ಸದ್ಯ ಅನಿಲ ಸೋರಿಕೆ ನಿಂತಿದೆ ಎಂದು ಪ್ರಯಾಗ್ ರಾಜ್ ಜಿಲ್ಲಾಧಿಕಾರಿ ಭಾನು ಚಂದ್ರ ಗೋಸ್ವಾಮಿ ತಿಳಿಸಿದ್ದಾರೆ.

ಅನಿಲ ಸೋರಿಕೆಯಿಂದಾಗಿ ಐಎಫ್‌ಎಫ್ ಸಿಒದ 15 ಮಂದಿ ನೌಕರರು ಅಸ್ವಸ್ಥಕ್ಕೀಡಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

- Advertisement -